ಗುವಾಹಟಿ : ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರ ಆಕರ್ಷಕ ಶತಕದ ಬಲದಿಂದ ಭಾರತ ತಂಡ ಆಸ್ಟ್ರೇಲಿಯಾ ಬಿಗ್ ಟಾರ್ಗೆಟ್ ನೀಡಿದೆ.
ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ 222ರನ್‌ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭದಲ್ಲಿಯೇ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್ ಕೇವಲ 6 ರನ್ ಗಳಿಸಿ ನಿರ್ಗಮಿಸಿದರೆ, ನಂತ ಬಂದ ಇಶಾನ್ ಕಿಸಾನ್ ಸೊನ್ನೆ ಸುತ್ತಿದರು. ಭಾರತ ತಂಡ ಪವರ್ ಪ್ಲೇ ಅಂತ್ಯಕ್ಕೆ2 ವಿಕೆಟ್ ಕಳೆದುಕೊಂಡು 43 ರನ್ ಗಳಿಸಿತು.
ನಂತರ ನಾಯಕ ಸೂರ್ಯಕುಮಾರ್ ಯಾದವ್ 39 ರನ್ ಗಳಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರು ಮತ್ತೊಂದೆಡೆ ಸದೃಢವಾಗಿ ಇನ್ನಿಂಗ್ಸ್ ಕಟ್ಟಿದರು. ತಾವೆದುರಿಸಿದ 57 ಎಸೆತಗಳಲ್ಲಿ 13 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 123 ರನ್ ಬಾರಿಸಿದರು. ಆಸೀಸ್ ವಿರುದ್ಧ ಟಿ20ಯಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕೊನೆಯಲ್ಲಿ ಬಂದ ತಿಲಕ್ ವರ್ಮಾ 31 ರನ್ ಬಾರಿಸಿದರು.
ಅಂತಿಮವಾಗಿ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 222ರನ್ ಬಾರಿಸಿ ಆಸ್ಟ್ರೇಲಿಯಾಗೆ ಬೃಹತ್ ಮೊತ್ತದ ಗುರಿಯನ್ನು ನೀಡಿದೆ.
ಆಸೀಸ್ ಪರ ಬೆಹ್ರೆನ್‌ಡ್ರಾಫ್, ಹರ್ಡಲ್ ಮತ್ತು ರಿಚರ್ಡ್‌ಸನ್ ತಲಾ 1 ವಿಕೆಟ್ ಪಡೆದರು.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…