ಹರಾರೆ : 48 ವರ್ಷಗಳ ವಿಶ್ವಕಪ್ ಕ್ರಿಕೆಟ್ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್ ಆಗಿದೆ.
ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್ ವಿರುದ್ಧ ಸ್ಕಾಟ್ಲೆಂಡ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಬಾರಿ ಐಸಿಸಿ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿರುವ ವೆಸ್ಟ್ ಇಂಡೀಸ್ ಸೋಲು ಕ್ರಿಕೆಟ್ ಅಭಿಮಾನಿಗಳನ್ನು ದಂಗುಬಡಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‌ಗಳಲ್ಲಿ ಕೇವಲ 181 ರನ್‌ಗಳಿಗೆ ಆಲೌಟ್ ಆಯ್ತು. ಸ್ಕಾಟ್ಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು 43.3 ಓವರ್‌ಗಳಲ್ಲಿ185 ರನ್ ಹೊಡೆಯುವ ಮೂಲಕ ಜಯ ಸಾಧಿಸಿತು.
ಸ್ಕಾಟ್ಲೆಂಡ್ ಪರ ಆಲ್‍ರೌಂಡರ್ ಆಟವಾಡಿದ ಬ್ರ್ಯಾಂಡನ್ ಮೆಕ್‍ಮುಲ್ಲೆನ್ ಬೌಲಿಂಗ್‍ನಲ್ಲಿ 3 ವಿಕೆಟ್ ಪಡೆದರೆ ಬ್ಯಾಟಿಂಗ್‍ನಲ್ಲಿ 69 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.
ಸ್ಕಾಟ್ಲೆಂಡ್ ವಿರುದ್ಧ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಸೂಪರ್ ಸಿಕ್ಸ್ ಹಂತದಲ್ಲೇ ಹೊರ ಬಿದ್ದಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ 2017ರ ಚಾಂಪಿಯನ್ಸ್ ಟ್ರೋಫಿ ಮತ್ತು 2022ರ ಟಿ20 ವಿಶ್ವಕಪ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.
1975 ಮತ್ತು 1979ರಲ್ಲಿ ಮೊದಲ ಎರಡು ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ ಆಗಿತ್ತು. ಅಲ್ಲದೇ 1983ರಲ್ಲಿ ರನ್ನರ್ ಅಪ್ ಕೂಡ ಆಗಿತ್ತು. ಒಟ್ಟಾರೆ ಇದೀಗ ಐಸಿಸಿ ಏಕದಿನ ವಿಶ್ವಕಪ್‍ನ 13ನೇ ಆವೃತ್ತಿಯಲ್ಲಿ ಅಂದರೆ 48 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡವಿಲ್ಲದೇ ವಿಶ್ವಕಪ್ ಟೂರ್ನಿ ನಡೆಯಲಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…