ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.
ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.
ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…