ಕ್ರೀಡೆ

ಮಹಿಳಾ ಕ್ರಿಕೆಟಿಗರಿಗೆ ಪುರುಷರ ಟೀಂನಷ್ಟೇ ಸಂಭಾವನೆ ನೀಡಲಿದೆಯೇ ಬಿಸಿಸಿಐ?

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್‌ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

 

andolana

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

25 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

28 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

29 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

30 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

34 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

39 mins ago