ಕ್ರೀಡೆ

ʼಈ ಸಲ ಕಪ್‌ ನಮ್ದೇನಾ?ʼ : ಪಂಜಾಬನ್ನು ಮಣಿಸಿ ಫೈನಲ್‌ ಗೇರಿದ ಆರ್‌ಸಿಬಿ

ಚಂಡೀಗಢ : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2025 ರ‌ ಟಿ20 ಕ್ರಿಕೆಟ್‌ ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಪಂಜಾಬ್‌ ಕಿಂಗ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಲ್ಲಿ ಸೋಲಿಸಿದೆ. ಈ ಮೂಲಕ ಆರ್‌ಸಿಬಿ ತಂಡ 9 ವರ್ಷಗಳ ಬಳಿಕ ಐಪಿಎಲ್‌ ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ಮುಲ್ಲನ್‌ಪುರದ ಮಹರಾಜ ಯದುವೀರ್‌ ಸಿಂಗ್‌ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಆಯ್ದುಕೊಂಡಿತು. ತಂಡದ ನಾಯಕ ರಜತ್‌ ಪಾಟಿದಾರ್‌ ಭರವಸೆಯನ್ನು ಹುಸಿಗೊಳಿಸದ ಬೌಲರ್‌ಗಳು ಕೇವಲ 14.1 ಓವರ್‌ಗಳಲ್ಲಿ ಪಂಜಾಬನ ಎಲ್ಲಾ ವಿಕೆಟ್‌ಗಳನ್ನು ತರಗೆಲೆಗಳಂತೆ ಬೀಳಿಸಿದರು.

14.1 ಓವರ್‌ಗಳಲ್ಲಿ ಕೇವಲ 101 ಗಳಿಸಿ ಪಂಜಾಬ್ ಆಲೌಟ್‌ ಆಯಿತು. ಇದಕ್ಕುತ್ತರವಾಗಿ ಬ್ಯಾಟ್‌ ಬೀಸಿದ ಆರ್‌ಸಿಬಿ 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಗೆದ್ದು ಬೀಗಿತು. ಈ ಮೂಲಕ 2009, 2011 ಮತ್ತು 2016ರ ಬಳಿಕ ನಾಲ್ಕನೇ ಬಾರಿಗೆ ಆರ್‌ಸಿಬಿ ಫೈನಲ್‌ ತಲುಪಿದೆ. ಇದರಿಂದ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಸಂತಸ ಮೂಡಿಸಿದ್ದು, `ಈ ಬಾರಿ ಕಪ್‌ ನಮ್ದೇʼ ಎನ್ನುವ ಹ್ಯಾಶ್‌ ಟ್ಯಾಗ್‌ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದೆ.

ಈ ಸೋಲಿನ ಹೊರತಾಗಿಯೂ ಪಂಜಾನ್‌ಗೆ ಮಗದೊಂದು ಅವಕಾಶ ಇರಲಿದ್ದು, ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಎಲಿಮಿನೇಟರ್‌ ವಿಜೇತ ತಂಡದ ಸವಾಲನ್ನು ಎದುರಿಸಲಿದೆ.

ಫೈನಲ್‌ ಪಂದ್ಯವು ಜೂನ್‌ 3 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

4 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

17 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

51 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

54 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

1 hour ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

2 hours ago