ಕ್ಯಾಂಟರ್ಬರಿ(ಇಂಗ್ಲೆಂಡ್): ಆಂಗ್ಲರ ನಾಡಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್‌ಗಳ ಭರ್ಜರಿ ಗೆಲುವಿನೊಂದಿಗೆ 23 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ತೋರಿದರು.
ಇಂಗ್ಲೆಂಡ್ನ ದಿ ಸ್ಟಿಟ್ಫೈರ್ ಗ್ರೌಂಡ್ ಸೇಂಟ್ ಲಾರೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 333 ರನ್‌ಗಳ ಬೃಹತ್ ಗುರಿ ನೀಡಿತು. ಇನ್ನಿಂಗ್ಸ್ ಶುರು ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದ್ರೆ, ನಂತರ ಕ್ರೀಸ್‌ನಲ್ಲಿ ಜತೆಯಾದ ನಾಯಕಿ ಹರ್ಮನ್ಪ್ರೀತ್ ಕೌರ್ ಅಬ್ಬರದ ಆಟಕ್ಕೆ ಮಂದಾದರು. ಮೈದಾನದ ಉದ್ದಗಲ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಅವರು 143 ರನ್ ಗಳಿಸಿದರೆ, ಹರ್ಲಿನ್ ಡಿಯೋಲ್ (58) ರನ್ ಸೇರಿಸಿ ತಂಡ 300 ರನ್ ಗಡಿ ದಾಟುವಂತೆ ಮಾಡಿದರು. ಕೌರ್ ಅಬ್ಬರದ ಆಟದಲ್ಲಿ 18 ಬೌಂಡರಿ, 4 ಸಿಕ್ಸರ್ ಸೇರಿದ್ದವು. ಇನ್ನು, ಸ್ಮೃತಿ ಮಂದಾನ (40) ರನ್ ಪೇರಿಸಿದರು.
334 ರನ್‌ಗಳ ಸವಾಲಿನ ಟಾರ್ಗೆಟ್ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡ ಕೇವಲ 12 ರನ್ ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಯಾಪ್ಸೆ (39), ಡೇನಿಲ್ (65), ಜಾನ್ಸಿ (39) ರನ್ಗಳಿಸಿ ತಂಡವನ್ನು ಗೆಲುವಿನ ದಡದತ್ತ ತೆಗೆದುಕೊಂಡು ಹೋಗುವ ಮುನ್ಸೂಚನೆ ನೀಡಿದರು. ಆದರೆ, ಇವರ ವಿಕೆಟ್ ಕೀಳುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಮಹಿಳೆಯರು ಮೇಲುಗೈ ಸಾಧಿಸಿದರು. ಕೊನೆಯದಾಗಿ, ತಂಡ 44.2 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 245 ರನ್ಗಳಿಸಲು ಮಾತ್ರ ಸಾಧ್ಯವಾಯಿತು. ಹೀಗಾಗಿ, ಆಂಗ್ಲ ಮಹಿಳೆಯರು 88 ರನ್‌ಗಳ ದೊಡ್ಡ ಅಂತರದ ಸೋಲು ಕಂಡರು.
ಬೌಲರ್ ರೇಣುಕಾ ಸಿಂಗ್ 4 ವಿಕೆಟ್ ಪಡೆದರೆ, ಹೇಮಲತಾ 2, ಶೆಫಾಲಿ ಹಾಗೂ ದೀಪ್ತಿ ಶರ್ಮಾ 1 ವಿಕೆಟ್ ಉರುಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿಯೂ ಭಾರತೀಯರು ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…