ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಐದು ವಿಕೆಟ್‌ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ನವಿ ಮುಂಬೈನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಐಪಿಎಲ್ ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.
ಅಷ್ಟೇ ಅಲ್ಲದೆ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ ಐಪಿಎಲ್‌ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.
2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್‌ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ ಐಪಿಎಲ್ ಫೈನಲ್ಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…