ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದು ಫೈನಲ್ ಗೆ ಲಗ್ಗೆ ಇಟ್ಟರೆ, ಕನ್ನಡಿಗ ಡಿ.ಪಿ. ಮನು(81.31) ಎ ಗುಂಪಿನಲ್ಲಿ ಜರ್ಮನಿಯ ಜುಲಿಯನ್ ವೆಬೆರ್ (82.39 ಮಿ.) ನಂತರ ಮೂರನೇ ಸ್ಥಾನ ಹಾಗೂ ಒಟ್ಟಾರೆ ಆರನೇ ಸ್ಥಾನ ಪಡೆದು ಫೈನಲ್ ನಲ್ಲಿ ಸ್ಥಾನ ಪಡೆದು ಫೈನಲ್ ಗೆ ತಲುಪಿದರು.
ಕಿಶೋರ್ ಜೇನಾ 80.55 ಮೀ. ಜಾವೆಲಿನ್ ಎಸೆತದ ಮೂಲಕ ಬಿ ಗುಂಪಿನ ಅರ್ಹತಾ ಸುತ್ತಿನಲ್ಲಿ 5ನೇ ಹಾಗೂ ಒಟ್ಟಾರೆ 9ನೇ ಸ್ಥಾನ ಪಡೆದು ಫೈನಲ್ ಗೆ ತೇರ್ಗಡೆಯಾದರು.
ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ಮನು ತನ್ನ 2ನೇ ಪ್ರಯತ್ನದಲ್ಲಿ 81.31 ಮೀ. ಜಾವೆಲಿನ್ ಎಸೆದಿದ್ದಾರೆ. ಆದರೆ ಅಂತಿಮ ಥ್ರೋನಲ್ಲಿ 72.4 ಮೀ.ದೂರಕ್ಕೆ ಜಾವೆಲಿನ್ ಎಸೆದರು.
ಫೈನಲ್ ಪಂದ್ಯವು ಭಾನುವಾರ ನಡೆಯಲಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…