ದೋಹಾ : ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಭಾರತದ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾನಿ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹಿಮ್ಮಿದ್ದಾರೆ.
ದೋಹಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದವರೇ ಆದ ಸೌರವ್ ಕೊಠಾರಿ ಅವರ ವಿರುದ್ಧ ಜಯ ದಾಖಲಿಸಿದ ಪಂಕಜ್ ಅಡ್ವಾಣಿ ೨೬ನೇ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2005 ರಲ್ಲಿ ಮೊದಲ ಬಾರಿ ವಿಶ್ವ ಪ್ರಶಸ್ತಿ ಗೆದ್ದ ಪಂಕಜ್ ಅಡ್ವಾಣಿ ಅವರು ಈಗ ಒಂಬತ್ತನೇ ಬಾರಿಗೆ ‘ಲಾಂಗ್ ಫಾರ್ಮ್ಯಾಟ್ ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಅಲ್ಲದೆ ಎಂಟು ಬಾರಿ ‘ಪಾಯಿಂಟ್ ಫಾರ್ಮ್ಯಾಟ್’ ಚಾಂಪಿಯನ್‌ಶಿಪ್‌ನಲ್ಲಿ ಜಯಗಳಿಸಿದ್ದಾರೆ ಮತ್ತು ಒಮ್ಮೆ ವಿಶ್ವ ಟೀಮ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.