ಬೊಗೊಟಾ: ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ, ಭಾರತದ ಹೆಮ್ಮೆಯ ಮೀರಾಬಾಯಿ ಚಾನು, ಕೊಲಂಬಿಯಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್ ನಲ್ಲೂ ಬೆಳ್ಳಿ ಪದಕ ಗೆದ್ದ ಜಯಿಸಿದ್ದಾರೆ.
49 ಕೆ.ಜಿ. ವಿಭಾಗದಲ್ಲಿ ಒಟ್ಟು 200 ಕೆ.ಜಿ ಭಾರ ಎತ್ತಿದ ಮೀರಾಬಾಯಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.
ಸ್ನ್ಯಾಚ್ ವಿಭಾಗದಲ್ಲಿ 87 ಕೆ.ಜಿ ಮತ್ತು ಕ್ಲೀನ್ ಆ್ಯಂಡ್ ಜೆರ್ಕ್ ವಿಭಾಗದಲ್ಲಿ ಮೀರಾಬಾಯಿ 113 ಕೆ.ಜಿ ಭಾರ ಎತ್ತುವಲ್ಲಿ ಯಶಸ್ವಿಯಾದರು.
ಈ ವಿಭಾಗದಲ್ಲಿ ಒಟ್ಟು 206 ಕೆ.ಜಿ ಭಾರ ಎತ್ತಿದ (93 ಕೆ.ಜಿ+113 ಕೆ.ಜಿ) ಚೀನಾದ ಜಿಯಾಂಗ್ ಹುಯಿಹುವಾ, ಚಿನ್ನದ ಪದಕ ಜಯಿಸಿದರು. ಟೋಕಿಯೊ ಒಲಿಂಪಿಕ್ ಚಾಂಪಿಯನ್ ಚೀನಾದವರೇ ಆದ ಹೋವ್ ಝಿಹು ಕಂಚಿನ ಪದಕ ( ಒಟ್ಟು 198 ಕೆ.ಜಿ) ಗೆದ್ದರು.
ಮಣಿಕಟ್ಟಿನ ಗಾಯದ ಸಮಸ್ಯೆಯ ಹೊರತಾಗಿಯೂ ಪ್ರಭಾವಿ ಪ್ರದರ್ಶನ ನೀಡುವಲ್ಲಿ ಮೀರಾ ಯಶಸ್ವಿಯಾದರು. ಸೆಪ್ಟೆಂಬರ್ ತಿಂಗಳಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದರೂ ಮೀರಾ, ಅಕ್ಟೋಬರ್‌ನಲ್ಲಿ ನಡೆದ ನ್ಯಾಷನಲ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದರು.
2017ರ ಚಾಂಪಿಯನ್ ಮಿರಾಬಾಯಿ ಈಗ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಬಾರಿ ಪದಕ ಜಯಿಸಿದ್ದಾರೆ.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…