ಅಹಮದಾಬಾದ್ : ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್ ಗಳು ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಅನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಇಂಗ್ಲೆಂಡ್ ಪರ ಜೋ ರೂಟ್ ಹೊರತುಪಿಡಿಸಿ ಯಾವೊಬ್ಬ ಆಟಗಾರನೂ ಸಹ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ ನಿಗದಿತ 50 ಓವರ್‌ಗೆ 9 ವಿಕೆಟ್ ನಷ್ಟಕ್ಕೆ 282 ರನ್ ಗಳಿಸುವ ಮೂಲಕ ನ್ಯೂಜಿಲ್ಯಾಂಡ್ ತಂಡಕ್ಕೆ 283 ರನ್ ಗಳ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಅನುಭವಿಸಿತು. ಕೇವಲ 14 ರನ್ ಗಳಿಸಿ ಮ್ಯಾಟ್ ಹೆನ್ರಿಗೆ ಮಲಾನ್ ವಿಕೆಟ್ ಒಪ್ಪಿಸಿ ಹೊರನಡೆದರು. ಆಂಗ್ಲರ ಪರ ಜೋ ರೂಟ್ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದರು. ರೂಟ್ 86 ಎಸೆತದಲ್ಲಿ 4 ಬೌಂಡರಿ ಜೊತೆ 1 ಸಿಕ್ಸ್ ಮೂಲಕ 77 ರನ್ ಗಳಿಸಿದರೆ, ನಾಯಕ ಜೋಸ್ ಬಟ್ಲರ್ 42 ಎಸೆತದಲ್ಲಿ 2 ಸಿಕ್ಸ್ ಮತ್ತು 22 ಬೌಂಡರಿ ಮೂಲಕ 43 ರನ್ ಸಿಡಿಸಿದರು. ಉಳಿಂದತೆ ಜಾನಿ ಬೈರ್‌ಸ್ಟೋವ್ 33 ರನ್, ಡೇವಿಡ್ ಮಲಾನ್ 14 ರನ್, ಹ್ಯಾರಿ ಬ್ರೂಕ್ 25 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 20 ರನ್, ಮೊಯೀನ್ ಅಲಿ 11 ರನ್, ಸ್ಯಾಮ್ ಕರನ್ 14 ರನ್, ಕ್ರಿಸ್ ವೋಕ್ಸ್ 11 ರನ್ ಗಳಿಸಿದರು.
ಇಂಗ್ಲೆಂಡ್ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ನ್ಯೂಜಿಲ್ಯಾಂಡ್ ತಂಡ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿತು. ಕಿವೀಸ್ ಪರ ಮ್ಯಾಟ್ ಹೆನ್ರಿ ಅವರು 10 ಓವರ್‌ಗೆ 48 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಆಂಗ್ಲರ ಕುಸಿತಕ್ಕೆ ಕಾರಣರಾದರು. ಉಳಿದಂತೆ ಮಿಚೆಲ್ ಸ್ಯಾಂಟ್ನರ್ 2, ಗ್ಲೆನ್ ಫಿಲಿಪ್ಸ್ 2, ರಚಿನ್ ರವೀಂದ್ರ 1 ಹಾಗೂ ಟ್ರೆಂಟ್ ಬೋಲ್ಟ್ ತಲಾ 1 ವಿಕೆಟ್ ಪಡೆದು ಮಿಂಚಿದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…