ಕಳೆದ ಅಕ್ಟೋಬರ್ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ನಾಕ್‌ಔಟ್ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.
ಇನ್ನು ಒಂದನೇ ಸೆಮಿ ಫೈನಲ್ ಪಂದ್ಯ ನವೆಂಬರ್ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್ 16ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್ 19ರ ಭಾನುವಾರದಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಫೈನಲ್ ಪಂದ್ಯದಲ್ಲಿ ಗೆಲ್ಲಲಿರುವ ತಂಡಕ್ಕೆ ವಿಶ್ವಕಪ್ ಟ್ರೋಫಿ ಜತೆಗೆ ಎಷ್ಟು ಬಹುಮಾನ ದೊರೆಯಲಿದೆ ಹಾಗೂ ಟ್ರೋಫಿ ಕೈ ತಪ್ಪಿಸಲಿರುವ ತಂಡಕ್ಕೆ ಎಷ್ಟು ಹಣ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಲಿರುವ ತಂಡಕ್ಕೆ 4 ಮಿಲಿಯನ್ ಡಾಲರ್ ಬಹುಮಾನ ದೊರೆಯಲಿದೆ. ಅಂದರೆ ಸುಮಾರು 33 ಕೋಟಿ ರೂಪಾಯಿಗಳು ಚಾಂಪಿಯನ್ ತಂಡದ ಕೈ ಸೇರಲಿದೆ. ಇನ್ನುಳಿದಂತೆ ರನ್ನರ್ ಅಪ್ ಆಗುವ ತಂಡಕ್ಕೆ 2 ಮಿಲಿಯನ್ ಡಾಲರ್ ಬಹುಮಾನ ದರ ಲಭಿಸಲಿದೆ. ಅಂದರೆ 16.5 ಕೋಟಿ ರೂಪಾಯಿಗಳು ರನ್ನರ್ ಅಪ್‌ಗೆ ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋಲುವ ಎರಡು ತಂಡಗಳಿಗೆ 8 ಲಕ್ಷ ಡಾಲರ್‌ಗಳನ್ನು ಪಡೆದುಕೊಳ್ಳಲಿವೆ. ಲೀಗ್ ಹಂತದಲ್ಲಿಯೇ ಹೊರಬೀಳಲಿರುವ ಆರು ತಂಡಗಳಿಗೆ ತಲಾ 1 ಲಕ್ಷ ಡಾಲರ್ ಲಭಿಸಲಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…