ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ.
ಇವರಿಬ್ಬರು ಮೊದಲ ವಿಕೆಟ್ಗೆ 104 ರನ್‌ಗಳ ಜೊತೆಯಾಟ ನಡೆಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಆದಾಗ್ಯೂ ಅರ್ಧಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ 45 ರನ್ ಬಾರಿಸಿ ಔಟಾದರೆ, ಶಫಾಲಿ ವರ್ಮಾ ಅರ್ಧಶತಕ ಬಾರಿಸಿ ಮುನ್ನಡೆಯುತ್ತಿದ್ದಾರೆ.
ಇದನ್ನು ಓದಿ: ಟಿ.20 ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್ ವಿದಾಯ
49 ಎಸೆತಗಳಲ್ಲಿ ಅರ್ಧಶತಕ
ಪ್ರತೀಕಾ ರಾವಲ್ ಅವರ ಇಂಜುರಿಯಿಂದಾಗಿ ಭಾರತ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಶಫಾಲಿ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಫಾರ್ಮ್ ಕಂಡುಕೊಂಡಿರುವ ಶಫಾಲಿ 49 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಮೂರು ವರ್ಷಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ ಶೆಫಾಲಿ 50 ರನ್‌ಗಳ ಗಡಿ ದಾಟಿರುವುದು ಇನ್ನಷ್ಟು ವಿಶೇಷವಾಗಿದೆ





