ಕ್ರೀಡೆ

ವಿಶ್ವಕಪ್ 2025 | ಶಫಾಲಿ ಅರ್ಧಶತಕ ; ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ.

ಇವರಿಬ್ಬರು ಮೊದಲ ವಿಕೆಟ್​ಗೆ 104 ರನ್​ಗಳ ಜೊತೆಯಾಟ ನಡೆಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಆದಾಗ್ಯೂ ಅರ್ಧಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ 45 ರನ್ ಬಾರಿಸಿ ಔಟಾದರೆ, ಶಫಾಲಿ ವರ್ಮಾ ಅರ್ಧಶತಕ ಬಾರಿಸಿ ಮುನ್ನಡೆಯುತ್ತಿದ್ದಾರೆ.

ಇದನ್ನು ಓದಿ: ಟಿ.20 ಕ್ರಿಕೆಟ್‌ಗೆ ಕೇನ್‌ ವಿಲಿಯಮ್ಸನ್‌ ವಿದಾಯ

49 ಎಸೆತಗಳಲ್ಲಿ ಅರ್ಧಶತಕ
ಪ್ರತೀಕಾ ರಾವಲ್ ಅವರ ಇಂಜುರಿಯಿಂದಾಗಿ ಭಾರತ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಶಫಾಲಿ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಫಾರ್ಮ್​ ಕಂಡುಕೊಂಡಿರುವ ಶಫಾಲಿ 49 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಮೂರು ವರ್ಷಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ ಶೆಫಾಲಿ 50 ರನ್‌ಗಳ ಗಡಿ ದಾಟಿರುವುದು ಇನ್ನಷ್ಟು ವಿಶೇಷವಾಗಿದೆ

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

2 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

3 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

4 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

5 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

6 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

7 hours ago