Mysore
18
clear sky

Social Media

ಬುಧವಾರ, 21 ಜನವರಿ 2026
Light
Dark

ವಿಶ್ವಕಪ್‌ | ಮಹಿಳಾ ತಂಡದ ಕರ್ನಾಟಕ ಆಟಗಾರ್ತಿಯರಿಗೆ ಬಹುಮಾನ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಬೆಂಗಳೂರು : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು.

ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿದ ಸಿದ್ದರಾಮಯ್ಯ ಆಟಗಾರ್ತಿಯರನ್ನು ಸನ್ಮಾನಿಸಿದರು. ಇದೇ ವೇಳೆ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Tags:
error: Content is protected !!