ಬೆಂಗಳೂರು : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು.
ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು.
ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿದ ಸಿದ್ದರಾಮಯ್ಯ ಆಟಗಾರ್ತಿಯರನ್ನು ಸನ್ಮಾನಿಸಿದರು. ಇದೇ ವೇಳೆ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…
ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…
ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ…
ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು…