ನವದೆಹಲಿ : ಕಳೆದ ಕೆಲವು ದಿನಗಳಿಂದ ಏಕದಿನ ವಿಶ್ವಕಪ್ ವೇಳಾಪಟ್ಟಿಯ ಬಗ್ಗೆ ಸೃಷ್ಟಿಯಾಗಿದ್ದ ಗೊಂದಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಕೆಲವು ಕಾರಣಗಳಿಂದಾಗಿ ಈ ಹಿಂದೆ ಪ್ರಕಟಿಸಿದ್ದ ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ತರಲು ಐಸಿಸಿ ಹಾಗೂ ಬಿಸಿಸಿಐ ಮುಂದಾಗಿದ್ದವು. ಇದೀಗ 2023ರ ಏಕದಿನ ವಿಶ್ವಕಪ್‌ನ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದ್ದು ಕೆಲವು ಪ್ರಮುಖ ಪಂದ್ಯಗಳು ನಡೆಯುವ ದಿನಾಂಕದಲ್ಲಿ ಬದಲಾವಣೆಯಾಗಿದೆ.
ಅದರಲ್ಲಿ ಪ್ರಮುಖವಾಗಿ ಭಾರಿ ಚರ್ಚೆಗೆ ಒಳಗಾಗಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಬದಲಾದ ದಿನಾಂಕ ಯಾವುದು ಎಂಬುದುಕ್ಕೆ ಉತ್ತರ ಸಿಕ್ಕಿದೆ. ಹಿಂದಿನ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಈಗ ಒಂದು ದಿನ ಮುಂಚಿತವಾಗಿ ಅಂದರೆ, ಅಕ್ಟೋಬರ್ 14 ರಂದು ನಡೆಯಲಿದೆ. ಭಾರತ-ಪಾಕಿಸ್ತಾನ ಮಾತ್ರವಲ್ಲದೆ ಒಟ್ಟು 9 ಪಂದ್ಯಗಳ ದಿನಾಂಕ ಬದಲಾಗಿದೆ.
ವಾಸ್ತವವಾಗಿ ಈ ಹಿಂದೆ ನಿಗದಿಯಾಗಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಭದ್ರತಾ ಸಮಸ್ಯೆ ಎದುರಾಗಿತ್ತು. ಏಕೆಂದರೆ ಪಂದ್ಯ ನಡೆಯುವ ದಿನ ಅಂದರೆ ಅಕ್ಟೋಬರ್ 15 ರಂದು ಭಾರತದಲ್ಲಿ ನವರಾತ್ರಿ ಆರಂಭವಾಗುತ್ತದೆ. ಅದರಲ್ಲೂ ನವರಾತ್ರಿಯ ಮೊದಲ ದಿನವನ್ನು ಗುಜರಾತ್ನಲ್ಲಿ ರಾತ್ರಿ ಇಡೀ ಸಂಭ್ರಮದಿಂದ ಆಚರಿಸಲಾಗುತ್ತದೆ.
ಹೀಗಾಗಿ ಅದೇ ದಿನ ಭಾರತ ಪಾಕ್ ಪಂದ್ಯ ನಡೆದರೆ, ಭದ್ರತಾ ಸಮಸ್ಯೆ ಎದುರಾಗಲಿದೆ ಎಂದು ಭದ್ರತಾ ಏಜೆನ್ಸಿಗಳು ಬಿಸಿಸಿಐಗೆ ಎಚ್ಚರಿಕೆ ನೀಡಿದ್ದವು. ಈ ವಿಚಾರವಾಗಿ ಸಭೆ ನಡೆಸಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಕೆಲವು ಕ್ರಿಕೆಟ್ ಮಂಡಳಿಗಳು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಬೇಕೆಂದು ಐಸಿಸಿಗೆ ಮನವಿ ಸಲ್ಲಿಸಿವೆ. ಹೀಗಾಗಿ ಪರಿಷ್ಕೃತ ವಿಶ್ವಕಪ್ ವೇಳಾಪಟ್ಟಿಯನ್ನು ಇಷ್ಟರಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದರು.
ಇದೀಗ ಹೊಸದಾಗಿ ಬಿಡುಗಡೆಯಾಗಿರುವ ನೂತನ ವೇಳಾಪಟ್ಟಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳಾಪಟ್ಟಿಯ ಜೊತೆಗೆ 9 ಪಂದ್ಯಗಳ ದಿನಾಂಕಗಳನ್ನು ಬದಲಾಯಿಸಲಾಗಿದೆ. ಇದರಲ್ಲಿ ಭಾರತದ 2 ಪಂದ್ಯಗಳು ಮತ್ತು ಪಾಕಿಸ್ತಾನದ 3 ಪಂದ್ಯಗಳು ಸೇರಿವೆ.
ಭಾರತದ ಯಾವ್ಯಾವ ಪಂದ್ಯಗಳ ದಿನಾಂಕ ಬದಲಾಗಿವೆ?
ಹೊಸ ವೇಳಾಪಟ್ಟಿಯ ಪ್ರಕಾರ, ಭಾರತ ತಂಡವು ಅಕ್ಟೋಬರ್ 15 ರ ಬದಲಿಗೆ ಅಕ್ಟೋಬರ್ 14 ರಂದು ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಆಡಲಿದೆ. ಹಾಗೆಯೇ ನವೆಂಬರ್ 11 ರಂದು ನಡೆಯಬೇಕಿದ್ದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯ ಇದೀಗ ಒಂದು ದಿನದ ಬಳಿಕ ಅಂದರೆ, ನವೆಂಬರ್ 12 ರಂದು ನಡೆಯಲ್ಲಿದೆ.
ಪಾಕಿಸ್ತಾನದ 3 ಪಂದ್ಯಗಳ ದಿನಾಂಕ ಬದಲಾವಣೆ
ವಿಶ್ವಕಪ್‌ನ ಹೊಸ ವೇಳಾಪಟ್ಟಿಯಲ್ಲಿ ಪಾಕಿಸ್ತಾನದ 3 ಪಂದ್ಯಗಳ ದಿನಾಂಕ ಬದಲಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 12 ರಂದು ನಡೆಯಬೇಕಿದ್ದ ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಪಂದ್ಯ ಎರಡು ದಿನ ಮುಂಚಿತವಾಗಿ ಅಂದರೆ, ಅಕ್ಟೋಬರ್ 12ಕ್ಕೆ ಬದಲಾಗಿ, ಅಕ್ಟೋಬರ್ 10 ರಂದು ಆಡಲಿದೆ. ಹಾಗೆಯೇ ನವೆಂಬರ್ 12 ರಂದು ನಡೆಯಬೇಕಿದ್ದ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಈಗ ನವೆಂಬರ್ 11 ರಂದು ನಡೆಯಲಿದೆ. ಈ ಎರಡು ಪಂದ್ಯಗಳ ಹೊರತಾಗಿ ಪಾಕಿಸ್ತಾನ ತಂಡ ಅಕ್ಟೋಬರ್ 15 ರ ಬದಲು, ಅಕ್ಟೋಬರ್ 14 ರಂದು ಟೀಂ ಇಂಡಿಯಾವನ್ನು ಎದುರಿಸಲಿದೆ.
ಈ ಪಂದ್ಯಗಳ ಹೊರತಾಗಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ದಿನಾಂಕವೂ ಬದಲಾಗಿದ್ದು, ಈ ಉಭಯ ತಂಡಗಳು ಈಗ ಅಕ್ಟೋಬರ್ 12 ರಂದು ಸ್ಪರ್ಧಿಸಲಿವೆ. ಹಾಗೆಯೇ ಅಕ್ಟೋಬರ್ 13 ರಂದು ನ್ಯೂಜಿಲೆಂಡ್ ತಂಡ, ಬಾಂಗ್ಲಾದೇಶವನ್ನು ಎದುರಿಸಲಿದೆ. ಇದರ ಜೊತೆಗೆ ಅಕ್ಟೋಬರ್ 15 ರಂದು ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ಮುಖಾಮುಖಿಯಾಗುತ್ತಿದ್ದರೆ, ನವೆಂಬರ್ 11 ರಂದು ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. ಈ ಮೂಲಕ ಒಟ್ಟು 9 ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಭಾರತದ ಪಂದ್ಯಗಳ ವಿವರ ಇಲ್ಲಿದೆ.
ಭಾರತ vs ಆಸ್ಟ್ರೇಲಿಯಾ, 8 ಅಕ್ಟೋಬರ್, ಚೆನ್ನೈ
ಭಾರತ vs ಅಫ್ಘಾನಿಸ್ತಾನ, 11 ಅಕ್ಟೋಬರ್, ದೆಹಲಿ
ಭಾರತ vs ಪಾಕಿಸ್ತಾನ, 14 ಅಕ್ಟೋಬರ್, ಅಹಮದಾಬಾದ್
ಭಾರತ vs ಬಾಂಗ್ಲಾದೇಶ, 19 ಅಕ್ಟೋಬರ್, ಪುಣೆ
ಭಾರತ vs ನ್ಯೂಜಿಲೆಂಡ್, 22 ಅಕ್ಟೋಬರ್, ಧರ್ಮಶಾಲಾ
ಭಾರತ vs ಇಂಗ್ಲೆಂಡ್, 29 ಅಕ್ಟೋಬರ್, ಲಕ್ನೋ
ಭಾರತ vs ಶ್ರೀಲಂಕಾ, 2 ನವೆಂಬರ್, ಮುಂಬೈ
ಭಾರತ vs ದಕ್ಷಿಣ ಆಫ್ರಿಕಾ, ನವೆಂಬರ್ 5, ಕೋಲ್ಕತ್ತಾ
ಭಾರತ vs ನೆದರ್ಲ್ಯಾಂಡ್ಸ್, ನವೆಂಬರ್ 12, ಬೆಂಗಳೂರು
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…