ಕ್ರೀಡೆ

ವಿಶ್ವಕಪ್‌: ಲಂಕಾ ಎದುರು ವಿಶ್ವಕಪ್‌ನಲ್ಲಿ ವಿಶ್ವದಾಖಲೆ ಬರೆದ ದಕ್ಷಿಣ ಆಫ್ರಿಕಾ..!

ನವದೆಹಲಿ: ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡರ್ ಡುಸೇನ್ ಹಾಗೂ ಏಯ್ಡನ್ ಮಾರ್ಕ್‌ರಮ್ ಬಾರಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಶ್ರೀಲಂಕಾ ಎದುರು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದಾಖಲೆ ನಿರ್ಮಿಸಿದೆ. ಮೊದಲು ಬ್ಯಾಟ್ ಮಾಡಿದ ಹರಿಣಗಳ ಪಡೆ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 428 ರನ್‌ ಬಾರಿಸಿದ್ದು, ಶ್ರೀಲಂಕಾಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಹರಿಣಗಳ ಪಡೆ ಆರಂಭದಲ್ಲೇ ನಾಯಕ ತೆಂಬ ಬವುಮಾ ವಿಕೆಟ್ ಕಳೆದುಕೊಂಡಿತು. ಬವುಮಾ ಕೇವಲ 8 ರನ್ ಬಾರಿಸಿ ದಿಲ್ಯ್ಷಾನ್ ಮದುಶನಕಾಗೆ ವಿಕೆಟ್ ಒಪ್ಪಿಸಿದ್ದರು. ಆರಂಭದಲ್ಲೇ ನಾಯಕ ವಿಕೆಟ್ ಕಳೆದುಕೊಂಡರೂ, ಮೈಚಳಿ ಬಿಟ್ಟು ಬ್ಯಾಟಿಂಗ್ ನಡೆಸಿ ಗಮನ ಸೆಳೆಯಿತು.

ಡಿ ಕಾಕ್- ಡುಸೇನ್ ದ್ವಿಶತಕದ ಜುಗಲ್ಬಂದಿ: ನಾಯಕ ಬವುಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ರಾಸ್ಸಿ ವಾನ್ ಡರ್ ಡುಸೇನ್ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್‌ ಜತೆಗೂಡಿ ದ್ವಿಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಲಂಕಾ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಡಿ ಕಾಕ್ ಕೇವಲ 84 ಎಸೆತಗಳಲ್ಲಿ 14 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 100 ರನ್ ಬಾರಿಸಿ ಮಿಂಚಿದರು. ಇನ್ನು ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವ್ಯಾನ್ ಡರ್ ಡುಸೇನ್, 110 ಎಸೆತಗಳಲ್ಲಿ 13 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 108 ರನ್ ಗಳಿಸಿ ವೆಲ್ಲಾಲಗೆಗೆ ವಿಕೆಟ್ ಒಪ್ಪಿಸಿದರು.

ವಿಶ್ವಕಪ್‌ನಲ್ಲಿ ಅತಿವೇಗದ ಶತಕ ಚಚ್ಚಿದ ಮಾರ್ಕ್‌ರಮ್: ಇನ್ನು ಡಿ ಕಾಕ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಮಾರ್ಕ್‌ರಮ್‌ ವಿಶ್ವಕಪ್ ಟೂರ್ನಿಯಲ್ಲಿ ಅತಿವೇಗದ ಶತಕ ಸಿಡಿಸಿ ದಾಖಲೆ ನಿರ್ಮಿಸಿದರು. ಲಂಕಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಮಾರ್ಕ್‌ರಮ್ ಕೇವಲ 49 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ದಾಖಲಿಸಿದರು. ಈ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತಿವೇಗದ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾದರು. ಈ ಮೊದಲು 2011ರ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಎದುರು ಐರ್ಲೆಂಡ್‌ನ ಕೆವಿನ್ ಒ ಬ್ರಿಯಾನ್ 50 ಎಸೆತಗಳಲ್ಲಿ ಶತಕ ಬಾರಿಸಿದ್ದು ದಾಖಲೆಯಾಗಿತ್ತು.

ವಿಶ್ವಕಪ್‌ನಲ್ಲಿ ವಿಶ್ವದಾಖಲೆ ಬರೆದ ಹರಿಣಗಳು:

ಲಂಕಾ ಎದುರು ದಕ್ಷಿಣ ಆಫ್ರಿಕಾ ತಂಡವು 5 ವಿಕೆಟ್ ಕಳೆದುಕೊಂಡು 428 ರನ್ ಬಾರಿಸುವ ಮೂಲಕ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ತಂಡವೊಂದು ಬಾರಿಸಿದ ಗರಿಷ್ಠ ಸ್ಕೋರ್ ಎನ್ನುವ ವಿಶ್ವದಾಖಲೆಗೆ ಹರಿಣಗಳ ಪಡೆ ಪಾತ್ರವಾಗಿದೆ. ಈ ಮೊದಲು 2015ರಲ್ಲಿ ಆಸ್ಟ್ರೇಲಿಯಾ ತಂಡವು ಪರ್ತ್‌ನಲ್ಲಿ ಆಫ್ಘಾನಿಸ್ತಾನ ವಿರುದ್ದ 7 ವಿಕೆಟ್ ಕಳೆದುಕೊಂಡು 417 ರನ್‌ ಬಾರಿಸಿತ್ತು. ಆ ದಾಖಲೆ ಇದೀಗ ನುಚ್ಚುನೂರಾಗಿದೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

10 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

13 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago