ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ.
ಭಾರತದ ಮಹಿಳಾ ತಂಡ ವರ್ಲ್ಡ್ ಗೇಮ್ಸ್ನಲ್ಲಿ ಚಿತ್ತಾಕರ್ಷಕ ಪ್ರದರ್ಶನ ನೀಡಿ ಎಲ್ಲರ ಹೃದಯ ಗೆದ್ದಿದೆ. ಟೂರ್ನಿಯ ಎಲ್ಲ ಲೀಗ್ ಪಂದ್ಯಗಳನ್ನು ಜಯಿಸಿದ್ದ ಭಾರತ ಅಜೇಯ ದಾಖಲೆ ಕಾಯ್ದುಕೊಂಡಿದೆ.
ಭಾರತವು ಆಸ್ಟ್ರೇಲಿಯವನ್ನು 20 ಓವರ್ಗಳಲ್ಲಿ 8 ವಿಕೆಟ್‌ಗೆ 114 ರನ್ ಒಳಗೆ ನಿಯಂತ್ರಿಸಿತು. ಪರಿಷ್ಕೃತ ಗುರಿ 42 ರನ್ ಪಡೆದ ಭಾರತವು 4ನೇ ಓವರ್ನಲ್ಲಿ ಚೇಸಿಂಗ್ ಮಾಡಿತು.
ಐಬಿಎಸ್ಎ ವರ್ಲ್ಡ್ ಗೇಮ್ಸ್‌ನಲ್ಲಿ ಅಂಧರ ಕ್ರಿಕೆಟ್ ಕಳೆದ ವಾರ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ನಡುವಿನ ಪಂದ್ಯದ ಮೂಲಕ ಆರಂಭವಾಗಿತ್ತು. ಇದು ವರ್ಲ್ಡ್ ಗೇಮ್ಸ್ನ ಮೊದಲ ಫೈನಲ್ ಪಂದ್ಯವಾಗಿದೆ. ಆಸ್ಟ್ರೇಲಿಯವನ್ನು ಭರ್ಜರಿಯಾಗಿ ಮಣಿಸಿರುವ ಭಾರತ ಈಗ ಪ್ರಶಸ್ತಿ ಜಯಿಸಿದೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…