ಕ್ರೀಡೆ

ವರ್ಲ್ಡ್ ಗೇಮ್ಸ್: ಐತಿಹಾಸಿಕ ಸ್ವರ್ಣ ಜಯಿಸಿದ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ

ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ.

ಭಾರತದ ಮಹಿಳಾ ತಂಡ ವರ್ಲ್ಡ್ ಗೇಮ್ಸ್ನಲ್ಲಿ ಚಿತ್ತಾಕರ್ಷಕ ಪ್ರದರ್ಶನ ನೀಡಿ ಎಲ್ಲರ ಹೃದಯ ಗೆದ್ದಿದೆ. ಟೂರ್ನಿಯ ಎಲ್ಲ ಲೀಗ್ ಪಂದ್ಯಗಳನ್ನು ಜಯಿಸಿದ್ದ ಭಾರತ ಅಜೇಯ ದಾಖಲೆ ಕಾಯ್ದುಕೊಂಡಿದೆ.

ಭಾರತವು ಆಸ್ಟ್ರೇಲಿಯವನ್ನು 20 ಓವರ್ಗಳಲ್ಲಿ 8 ವಿಕೆಟ್‌ಗೆ 114 ರನ್ ಒಳಗೆ ನಿಯಂತ್ರಿಸಿತು. ಪರಿಷ್ಕೃತ ಗುರಿ 42 ರನ್ ಪಡೆದ ಭಾರತವು 4ನೇ ಓವರ್ನಲ್ಲಿ ಚೇಸಿಂಗ್ ಮಾಡಿತು.

ಐಬಿಎಸ್ಎ ವರ್ಲ್ಡ್ ಗೇಮ್ಸ್‌ನಲ್ಲಿ ಅಂಧರ ಕ್ರಿಕೆಟ್ ಕಳೆದ ವಾರ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ನಡುವಿನ ಪಂದ್ಯದ ಮೂಲಕ ಆರಂಭವಾಗಿತ್ತು. ಇದು ವರ್ಲ್ಡ್ ಗೇಮ್ಸ್ನ ಮೊದಲ ಫೈನಲ್ ಪಂದ್ಯವಾಗಿದೆ. ಆಸ್ಟ್ರೇಲಿಯವನ್ನು ಭರ್ಜರಿಯಾಗಿ ಮಣಿಸಿರುವ ಭಾರತ ಈಗ ಪ್ರಶಸ್ತಿ ಜಯಿಸಿದೆ.

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago