ಕ್ರೀಡೆ

WPL 2024: ಹರಾಜಿನ ಬಳಿಕ 5 ತಂಡಗಳು ಹೀಗಿವೆ!

ವುಮೆನ್ಸ್‌ ಪ್ರೀಮಿಯರ್‌ ಲೀಗ್‌(WPL 2024) ಸೀಸನ್-2 ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ಮುಂಬೈನಲ್ಲಿ ನಡೆದ ಈ ಹರಾಜಿನಲ್ಲಿ ಒಟ್ಟು 165 ಕ್ರೀಡಾಪಟುಗಳು ಭಾಗವಹಿಸಿದ್ದರು.

ಇನ್ನು ಹರಾಜಿನಲ್ಲಿ ಕಾಣಿಸಿಕೊಂಡ 165 ಆಟಗಾರ್ತಿಯರಲ್ಲಿ ಒಟ್ಟು 30 ಪ್ಲೇಯರ್ಸ್​ಗೆ ಅವಕಾಶ ಸಿಕ್ಕಿದೆ. 5 ತಂಡಗಳ ನಡುವಣ ಹರಾಜಿನಲ್ಲಿ ಅತ್ಯಧಿಕ ಮೊತ್ತಕ್ಕೆ ಸೇಲ್‌ ಆದವರು ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್​ಲ್ಯಾಂಡ್ ಹಾಗೂ ಕಾಶ್ವೀ ಗೌತಮ್. ಅನ್ನಾಬೆಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2 ಕೋಟಿ ರೂ.ಗೆ ಖರೀದಿಸಿದರೆ, ಅನ್​ಕ್ಯಾಪ್ಡ್​ ಕಾಶ್ವೀ ಗೌತಮ್ ಅವರನ್ನು 2 ಕೋಟಿ ರೂ.ಗೆ ಗುಜರಾತ್ ಜೈಂಟ್ಸ್ ತಂಡ ಖರೀದಿಸಿದೆ.

ಹರಾಜಿನ ಬಳಿಕ ಪ್ರತಿ ತಂಡಗಳಲ್ಲಿರುವ ಆಟಗಾರ್ತಿಯರ ಪಟ್ಟಿ ಹೀಗಿದೆ.

ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್*, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಲಾರೆನ್ ಬೆಲ್*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

*= ವಿದೇಶಿ ಆಟಗಾರರು

ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿತು. ಇದೀಗ ಹರಾಜಿನ ಮೂಲಕ ಒಟ್ಟು 7 ಪ್ಲೇಯರ್ಸ್ ಅನ್ನು ಖರೀದಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago