ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಮೈದಾನದಲ್ಲಿ ಇಂದು (ಮಾ.೧೫) ನಡೆಯಲಿರುವ ವುಮೆನ್ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಮುಖಾಮುಖಿಯಾಗಲಿದೆ.
ಗೆದ್ದ ತಂಡ ಮಾ.೧೭ ರ ಭಾನುವಾರದಂದು ಚಾಂಪಿಯನ್ ಪಟ್ಟಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದೊಂದಿಗೆ ಸೆಣೆಸಾಡಲಿದೆ.
ಮೊದಲ ಬಾರಿಗೆ ಈ ಸೀಸನ್‌ನಲ್ಲಿ ಆರ್‌ಸಿಬಿ ಕ್ವಾಲಿಫೈ ಆಗಿದ್ದು, ಚೊಚ್ಚಲ ಟ್ರೋಫಿಗೆ ಮುತ್ತಿಡುವ ಹುಮ್ಮಸ್ಸಿನಲ್ಲಿದೆ. ಇತ್ತ ಮೊದಲ ಸೀಸನ್‌ನಲ್ಲಿಯೇ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ತಂಡ ಈ ಬಾರಿಯೂ ಗೆಲ್ಲುವ ನೆಚ್ಚಿನ ತಂಡವಾಗಿದ್ದು, ಈ ಇಬ್ಬರ ಕಾದಾಟ ಕ್ರೀಡಾಭಿಮಾನಿಗಳಿಗೆ ರಸದೌತಣ ಉಣಬಡಿಸಲಿದೆ.
ಸದ್ಯ ಇತ್ತಂಡಗಳು ಇದುವರೆಗೆ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಮುಂಬೈ ಮೂರು ಬಾರಿ ಗೆದ್ದರೇ, ಆರ್‌ಸಿಬಿ ಕೇವಲ ಒಂದು ಬಾರಿ ಮಾತ್ರ ಗೆದ್ದಿದೆ. ಇವತ್ತಿನ ಪಂದ್ಯ ಗೆದ್ದು, ಮುಂಬೈ ವಿರುದ್ಧ ಅಜೇಯ ಓಟವನ್ನು ಆರ್‌ಸಿಬಿ ಮುಂದುವರೆಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಡಬ್ಲ್ಯೂಪಿಎಲ್ ಸೀಸನ್ 2 ರಲ್ಲಿ ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ಒಟ್ಟು 8 ಪಂದ್ಯಗಳನ್ನಾಡಿದ್ದು, ಅದರಲ್ಲಿ ತಲಾ 4 ಗೆಲುವು, 4 ಸೋಲು ಕಂಡು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ.
ಹರ್ಮನ್‌ಪ್ರೀತ್ ಪಡೆ ಲೀಗ್‌ನಲ್ಲಿ 8 ಪಂದ್ಯ ಆಡಿದ್ದು, 5ರಲ್ಲಿ ಗೆಲುವು ಸಾಧಿಸಿ 2ನೇ ಸ್ಥಾನದಲ್ಲಿದೆ. ಉ
ಭಯ ತಂಡಗಳು ಲೀಗ್ ಹಂತದಲ್ಲಿ 2 ಬಾರಿ ಮುಖಾಮುಖಿಯಾಗಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಗೆದ್ದರೇ, ಎರಡನೇ ಪಂದ್ಯದಲ್ಲಿ ಆರ್‌ಸಬಿ ಗೆದ್ದು ಎಲಿಮಿನೇಟರ್‌ಗೆ ಲಗ್ಗೆಯಿಟ್ಟಿತು.
ಪಂದ್ಯ ಆರಂಭ: ರಾತ್ರಿ 7.30ಕ್ಕೆ,
ನೇರಪ್ರಸಾರ: ಸ್ಪೋರ್ಟ್ಸ್ 18, ಜಿಯೋ ಸಿನಿಮಾ
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…