ಕ್ರೀಡೆ

WPL-2024: ಯುಪಿ ವಾರಿಯರ್ಸ್‌ಗೆ ಮಣಿದ ಗುಜರಾತ್‌ ಜೈಂಟ್ಸ್‌!

ಬೆಂಗಳೂರು : ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಜೈಂಟ್ಸ್, ಉತ್ತಮ ಆರಂಭ ಪಡೆಯಿತು. ನಾಯಕಿ ಬೆಥ್ ಮೂನಿ 16 ಎಸೆತಗಳಲ್ಲಿ 2 ಬೌಂಡರಿ ಸಹಿತ 16 ರನ್ ಗಳಿಸಿ ಸೋಫಿ ಎಕ್ಸೆಸ್ಟೋನ್ ಅವರ ಎಸೆತಕ್ಕೆ ಗ್ರೇಸ್ ಹರಿಸ್ ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದರು. 26 ಎಸೆತ ಎದುರಿಸಿದ ಲೌರಾ ವೊಲ್ವಾರ್ಡ್ಸ್ 4 ಬೌಂಡರಿ ಸಹಿತ 28 ರನ್ ಪೇರಿಸಿ, ಸೋಫಿ ಅವರ ಬೌಲಿಂಗ್ ನಲ್ಲಿ ಔಟ್ ಆದರು.

ಹರ್ಲಿನ್ ಡಿಯೋಲ್ 24 ಎಸೆತದಲ್ಲಿ 1 ಬೌಂಡರಿ ಸಹಿತ 18 ರನ್ ಗಳಿಸಿ ರಾಜೇಶ್ವರಿ ಗಾಯಕ್ವಾಡ್ ಅವರ ಸ್ಪಿನ್ ಗೆ ಅಂಜಲಿ ಸರ್ವಾನಿಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಪೋಬೆ ಲಿಚೀಲ್ಡ್ 26 ಎಸೆತ ಎದುರಿಸಿ 4 ಬೌಂಡರಿ 1 ಸಿಕ್ಸ್ ಹೊಡೆದು 35 ರನ್ ಗಳಿಸಿ ಸೈಮಾ ತಾಕೋರ್ ಅವರ ರನೌಟ್ ಗೆ ಗುರಿಯಾದರು. ಅಶ್ಲೇಗ್ ಗಾರ್ಡ್ನರ್ 17 ಎಸೆತಗಳಲ್ಲಿ 1 ಸಿಕ್ಸ‌ರ್ 4 ಬೌಂಡರಿ ಬಾರಿಸಿ ಅಲ್ಪ ಮಟ್ಟಿನಲ್ಲಿ ತಂಡಕ್ಕೆ ಆಸರೆಯಾಗಿ ಸೋಫಿ ಎಸೆತಕ್ಕೆ ಪೆವಿಲಿಯನ್ ಸೇರಿದಾಗ ದಯಾಲನ್ ಹೇಮಲತಾ 2 ರನ್ ಗಳಿಸಿದರು. ಕತ್ರೈನ್ ಎಮ್ಮ ಬ್ರೆಸ್ 5 ರನ್ ಗಳಿಸಿ ಅಜೇಯರಾಗಿ ಉಳಿದರು.

ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು. ಯುಪಿ ವಾರಿಯರ್ಸ್ ಪರ ಸೋಫಿ ಎಕ್ಸೆಸ್ಟೋನ್ 3, ರಾಜೇಶ್ವರಿ ಗಾಯಕ್ವಾಡ್ 1 ವಿಕೆಟ್ ಪಡೆದರು.

ಈ ಮೊತ್ತ ಚೇಸ್‌ ಮಾಡಿದ ಯುಪಿ ವಾರಿಯರ್ಸ್‌ ಆರಂಭಿಕ ಬ್ಯಾಟರ್ ಗಳಾಗಿ ಕ್ರೀಸ್ ಗೆ ಇಳಿದ ತಂಡದ ನಾಯಕಿ ಅಲಿಸ್ಸಾ ಹೀಲಿ 21 ಎಸೆತಗಳಲ್ಲಿ 7 ಬೌಂಡರಿ ಸಹಿತ 33 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಕಿರಣ್ ನೌಗಿರೆ 8 ಎಸೆತ ಎದುರಿಸಿ 2 ಬೌಂಡರಿಯೊಂದಿಗೆ 12 ರನ್ ಗಳಿಸಿ ನಿರ್ಗಮಿಸಿದರು. ಚಾಮರಿ 17 ರನ್ ಗಳಿಸಿದರೆ, ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಗ್ರೇಸ್ ಹ್ಯಾರಿಸ್ 33 ಎಸೆತದಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 60 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಶ್ವೇತಾ 2 ಹಾಗೂ ದೀಪ್ತಿ ಶರ್ಮಾ17 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಗುಜರಾತ್ ಜೈಂಟ್ಸ್ ಪರ ತನುಜಾ 2 ವಿಕೆಟ್, ಮೇಘನಾ ಸಿಂಗ್ ಹಾಗೂ ಕ್ಯಾಥರಿನ್ ತಲಾ 1 ವಿಕೆಟ್ ಪಡೆದುಕೊಂಡರು.

ಪಂದ್ಯ ಶ್ರೇಷ್ಠ: ಗ್ರೇಸ್ ಹ್ಯಾರಿಸ್

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago