ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ ಆರ್‌ಸಿಬಿ, 3 ವಿಕೆಟ್ ನಷ್ಟಕ್ಕೆ 204 ಗಳಿಸಿ ಗುರಿ ಮುಟ್ಟಿತು.
ಡೆಲ್ಲಿ ಕ್ಯಾಪಿಟಲ್ ನಾಯಕಿ ಜೆಮಿಯಾ ರಾಡ್ರಿಗಸ್ (57), ಅನುಭವಿ ಲೌರಾ ವೊಲ್ವಾರ್ಡ್ತ್ (44) ಹಾಗೂ ಚಿನ್ನೆಲ್ಲಿ ಹೆನ್ರಿ (35) ಅವರ ಅಮೋಘ ಆಟದ ಬಲದಿಂದ ನಾಲ್ಕು ವಿಕೆಟ್ ನಷ್ಟಕ್ಕೆ 203 ರನ್ ಕಲೆ ಹಾಕಿತ್ತು.
ಈ ಬೃಹತ್ ಮೊತ್ತದ ಎದುರು ಕೇವಲ 9 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡ ಆರಂಭಿಕ ಆಘಾತಕ್ಕೊಳಗಾಗಿದ್ದ ಆರ್‌ಸಿಬಿಗೆ, ನಾಯಕಿ ಸ್ಮೃತಿ ಮಂದಾನ ಹಾಗೂ ಜಾರ್ಜಿಯಾ ವೋಲ್ ಲೀಲಾಜಾಲವಾಗಿ ಬ್ಯಾಟ್ ಬೀಸಿ ತಂಡಕ್ಕೆ ಚೇತರಿಕೆ ನೀಡಿದರು.
ಕೊನೆಯಲ್ಲಿ ಅನುಭವದ ಆಟವಾಡಿದ ನದೀನ್ ಡಿ ಕ್ಲರ್ಕ್ (7)ಹಾಗೂ ರಾಧಾ ಯಾದವವ್(12) ಕೊನೇ ಓವರ್‌ನಲ್ಲಿ ಬೇಕಿದ್ದ 10 ರನ್‌ಗಳನ್ನು ಕೇವಲ ನಾಲ್ಕೇ ಎಸೆತಗಳಲ್ಲಿ ಗಳಿಸುವ ಮೂಲಕ, ಆರ್‌ಸಿಬಿಯನ್ನು ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…