ಕ್ರೀಡೆ

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಟಾಸ್‌ ಸೋತರು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ ಆರ್‌ಸಿಬಿ, 3 ವಿಕೆಟ್‌ ನಷ್ಟಕ್ಕೆ 204 ಗಳಿಸಿ ಗುರಿ ಮುಟ್ಟಿತು.

ಡೆಲ್ಲಿ ಕ್ಯಾಪಿಟಲ್‌ ನಾಯಕಿ ಜೆಮಿಯಾ ರಾಡ್ರಿಗಸ್‌ (57), ಅನುಭವಿ ಲೌರಾ ವೊಲ್ವಾರ್ಡ್ತ್‌ (44) ಹಾಗೂ ಚಿನ್ನೆಲ್ಲಿ ಹೆನ್ರಿ (35) ಅವರ ಅಮೋಘ ಆಟದ ಬಲದಿಂದ ನಾಲ್ಕು ವಿಕೆಟ್‌ ನಷ್ಟಕ್ಕೆ 203 ರನ್‌ ಕಲೆ ಹಾಕಿತ್ತು.

ಈ ಬೃಹತ್‌ ಮೊತ್ತದ ಎದುರು ಕೇವಲ 9 ರನ್‌ಗೆ ಮೊದಲ ವಿಕೆಟ್‌ ಕಳೆದುಕೊಂಡ ಆರಂಭಿಕ ಆಘಾತಕ್ಕೊಳಗಾಗಿದ್ದ ಆರ್‌ಸಿಬಿಗೆ, ನಾಯಕಿ ಸ್ಮೃತಿ ಮಂದಾನ ಹಾಗೂ ಜಾರ್ಜಿಯಾ ವೋಲ್ ಲೀಲಾಜಾಲವಾಗಿ ಬ್ಯಾಟ್‌ ಬೀಸಿ ತಂಡಕ್ಕೆ ಚೇತರಿಕೆ ನೀಡಿದರು.

ಕೊನೆಯಲ್ಲಿ ಅನುಭವದ ಆಟವಾಡಿದ ನದೀನ್‌ ಡಿ ಕ್ಲರ್ಕ್‌ (7)ಹಾಗೂ ರಾಧಾ ಯಾದವವ್‌(12) ಕೊನೇ ಓವರ್‌ನಲ್ಲಿ ಬೇಕಿದ್ದ 10 ರನ್‌ಗಳನ್ನು ಕೇವಲ ನಾಲ್ಕೇ ಎಸೆತಗಳಲ್ಲಿ ಗಳಿಸುವ ಮೂಲಕ, ಆರ್‌ಸಿಬಿಯನ್ನು ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

2 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

8 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

8 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

8 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

8 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

8 hours ago