ಕ್ರೀಡೆ

ಒಂದೇ ರಾಜ್ಯದಲ್ಲಿ ನಡೆಯಲಿದೆ WPL2024: ಜಯ್ ಶಾ

ಐಪಿಎಲ್ 2024 ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು ಮೇ ಕೊನೆಯಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ದೃಢಪಡಿಸಿದ್ದಾರೆ.

ಮೊಟ್ಟ ಮೊದಲ ಬಾರಿಗೆ ದುಬೈನಲ್ಲಿ ಡಿಸೆಂಬರ್ 19ರಂದು ಐಪಿಎಲ್ 2024ರ ಮಿನಿ ಹರಾಜು ನಡೆಯಲಿದೆ. ವಿದೇಶದಲ್ಲಿ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು.

ಇದು ಕೊನೆಯ ಮಿನಿ ಹರಾಜು ಆಗಿದ್ದು, ಮುಂದಿನ ವರ್ಷ ಮೆಗಾ ಹರಾಜು ನಡೆಯಲಿದೆ. 10 ಫ್ರಾಂಚೈಸಿಗಳು ಒಟ್ಟು 77 ಸ್ಥಾನಗಳನ್ನು ಭರ್ತಿ ಮಾಡಲು ಈ ಬಾರಿ ಬಿಡ್‌ ಮಾಡಲಿದ್ದಾರೆ. ಈ ಬಿಡ್‌ನಲ್ಲಿ ಒಟ್ಟು 1166 ಆಟಗಾರರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 30 ಸ್ಥಾನಗಳನ್ನು ವಿದೇಶಿ ಆಟಗಾರರಿಗೆ ಮೀಸಲಿಡಲಾಗಿದೆ.

ಮಹಿಳಾ ಪ್ರೀಮಿಯರ್ ಲೀಗ್ ಮುಂದಿನ ಸೀಸನ್ ಫೆಬ್ರವರಿಯಲ್ಲಿ ಆರಂಭವಾಗಲಿದೆ ಎಂದು ಜಯ್ ಶಾ ಹೇಳಿದ್ದಾರೆ. ಶನಿವಾರ ಮುಂಬೈನಲ್ಲಿ ಡಬ್ಲ್ಯುಪಿಎಲ್ ಹರಾಜು ನಡೆಯಿತು. ಈ ವೇಳೆ, ಈ ಬಾರಿ ಒಂದು ಜಿಲ್ಲೆಯಲ್ಲಿ ಲೀಗ್ ಆಯೋಜಿಸಬಹುದು. ಸ್ಥಳದ ಆಯ್ಕೆಯು ಬಿಸಿಸಿಐ ಮತ್ತು ಫ್ರಾಂಚೈಸಿಗಳ ಜಂಟಿ ನಿರ್ಧಾರವಾಗಿರುತ್ತದೆ ಎಂದು ಶಾ ಹೇಳಿದರು. ಆದಾಗ್ಯೂ, ಭವಿಷ್ಯದಲ್ಲಿ ವಿವಿಧ ನಗರಗಳಲ್ಲಿ WPL ಅನ್ನು ಆಯೋಜಿಸುವ ಆಲೋಚನೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago