ಹೊಸದಿಲ್ಲಿ: ಒಲಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ.
ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್ 10ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾಗಿದ್ದರು. ಆನಂತರ ಮೂತ್ರ ಪರೀಕ್ಷೆಗಾಗಿ ನಿರಾಕರಿಸಿದರು. ಈ ನಿರಾಕರಣೆ ನಿಯಮ ಬಾಹಿರ ಎಂದು ನಾಡಾ ನಾಲ್ಕು ವರ್ಷಗಳ ಕಾಲ ಅವರನ್ನು ನಿಷೇಧಿಸಿದೆ.
ನಾಡಾ ಕಳೆದ ಏಪ್ರಿಲ್ 23 ರಂದು ಮೊದಲಬಾರಿಗೆ ಇವರನ್ನು ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಲಿ (UWW) ಕೂಡ ಅಮಾನತುಗೊಳಿಸಿತು. ಇವುಗಳ ವಿರುದ್ಧ ಪೂನಿಯಾ ಮೇಲ್ಮನವಿ ಅರ್ಜಿ ಸಲ್ಲಿಸಿದರು, ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್(ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತು.
ನಾಡಾಗೆ ಮೂತ್ರ ನೀಡದೆ ಇರುವ ಕುರಿತು ಜೂನ್ 23ರಂದು ಕುಸ್ತಿಪಟುವಿಗೆ ನೋಟಿಸ್ ನೀಡಿದರು. ನಂತರ ಸೆಪ್ಟೆಂಬರ್ 20 ಮತ್ತು ಆಕ್ಟೋಬರ್ 4 ರಂದು ವಿಚಾರಣೆ ನಡೆಸಿದ್ದರು.
ಈಗ ಆದೇಶ ಪ್ರಕಟಿಸಿರುವ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಕಲಂ 10.3.1 ರ ಅಡಿಯಲ್ಲಿ ಈ ಎಲ್ಲ ನಿರ್ಭಂದಗಳಿಗೂ ಒಳಪಡುತ್ತದೆ ಎಂದು ಹೇಳಿದೆ. ಇನ್ನು 4 ವರ್ಷಗಳ ಕಾಲ ಭಜರಂಗ್ ಪೂನಿಯ ಯಾವುದೇ ಕುಸ್ತಿಗಳಲ್ಲಿ ಪಾಳ್ಗೊಳ್ಳುವ ಹಾಗಿಲ್ಲ ಮತ್ತು ದೇಶ ಹಾಗೂ ವಿದೇಶಗಳಲ್ಲಿ ಕೋಚಿಂಗ್ ಕೆಲಸಕ್ಕೂ ಅರ್ಜಿ ಸಲ್ಲಿಸುವ ಆಗಿಲ್ಲ ಎಂದು ಷರತ್ತು ವಿಧಿಸಿದೆ.
ಮಹಿಳಾ ಕುಸಿಪಟುಗಳ ಮೇಲಾಗುತ್ತಿದ್ದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಂತರ ವಿನೇಶ್ ಪೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾದರು. ಪೂನಿಯಾ ಅವರನ್ನು ಭಾರತ ಕಿಸಾನ್ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ರೈಲ್ವೆ ಉದ್ಯೋಗಕ್ಕೆ ಪೂನಿಯಾ ರಾಜೀನಾಮೆ ನೀಡಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…