Categories: ಕ್ರೀಡೆ

ಕುಸ್ತಿಪಟು ಭಜರಂಗ್‌ ಪೂನಿಯಾ 4 ವರ್ಷ ನಿಷೇಧ

ಹೊಸದಿಲ್ಲಿ: ಒಲಂಪಿಕ್ಸ್‌ ಪದಕ ವಿಜೇತ ಕುಸ್ತಿಪಟು ಭಜರಂಗ್‌ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ.

ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್‌ 10ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾಗಿದ್ದರು. ಆನಂತರ ಮೂತ್ರ ಪರೀಕ್ಷೆಗಾಗಿ ನಿರಾಕರಿಸಿದರು. ಈ ನಿರಾಕರಣೆ ನಿಯಮ ಬಾಹಿರ ಎಂದು ನಾಡಾ ನಾಲ್ಕು ವರ್ಷಗಳ ಕಾಲ ಅವರನ್ನು ನಿಷೇಧಿಸಿದೆ.

ನಾಡಾ ಕಳೆದ ಏಪ್ರಿಲ್ 23 ರಂದು ಮೊದಲಬಾರಿಗೆ ಇವರನ್ನು ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಲಿ (UWW) ಕೂಡ ಅಮಾನತುಗೊಳಿಸಿತು. ಇವುಗಳ ವಿರುದ್ಧ ಪೂನಿಯಾ ಮೇಲ್ಮನವಿ ಅರ್ಜಿ ಸಲ್ಲಿಸಿದರು, ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್‌(ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತು.

ನಾಡಾಗೆ ಮೂತ್ರ ನೀಡದೆ ಇರುವ ಕುರಿತು ಜೂನ್‌ 23ರಂದು ಕುಸ್ತಿಪಟುವಿಗೆ ನೋಟಿಸ್‌ ನೀಡಿದರು. ನಂತರ ಸೆಪ್ಟೆಂಬರ್‌ 20 ಮತ್ತು ಆಕ್ಟೋಬರ್ 4‌ ರಂದು ವಿಚಾರಣೆ ನಡೆಸಿದ್ದರು.

ಈಗ ಆದೇಶ ಪ್ರಕಟಿಸಿರುವ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (‌ADDP) ಕಲಂ 10.3.1 ರ ಅಡಿಯಲ್ಲಿ ಈ ಎಲ್ಲ ನಿರ್ಭಂದಗಳಿಗೂ ಒಳಪಡುತ್ತದೆ ಎಂದು ಹೇಳಿದೆ. ಇನ್ನು 4 ವರ್ಷಗಳ ಕಾಲ ಭಜರಂಗ್‌ ಪೂನಿಯ ಯಾವುದೇ ಕುಸ್ತಿಗಳಲ್ಲಿ ಪಾಳ್ಗೊಳ್ಳುವ ಹಾಗಿಲ್ಲ ಮತ್ತು ದೇಶ ಹಾಗೂ ವಿದೇಶಗಳಲ್ಲಿ ಕೋಚಿಂಗ್‌ ಕೆಲಸಕ್ಕೂ ಅರ್ಜಿ ಸಲ್ಲಿಸುವ ಆಗಿಲ್ಲ ಎಂದು ಷರತ್ತು ವಿಧಿಸಿದೆ.

ಮಹಿಳಾ ಕುಸಿಪಟುಗಳ ಮೇಲಾಗುತ್ತಿದ್ದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಂತರ ವಿನೇಶ್‌ ಪೋಗಟ್‌, ಬಜರಂಗ್‌ ಪೂನಿಯಾ ಕಾಂಗ್ರೆಸ್‌ ಸೇರ್ಪಡೆಯಾದರು. ಪೂನಿಯಾ ಅವರನ್ನು ಭಾರತ ಕಿಸಾನ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್‌ ಸೇರ್ಪಡೆಗೂ ಮುನ್ನ ರೈಲ್ವೆ ಉದ್ಯೋಗಕ್ಕೆ ಪೂನಿಯಾ ರಾಜೀನಾಮೆ ನೀಡಿದ್ದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago