ಕ್ರೀಡೆ

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ದೆಹಲಿ:  ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ.

ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿದ್ದು, ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಡಬ್ಲ್ಯುಎಫ್‌ಐನಿಂದ ನಾನು ಸಾಕಷ್ಟು ತುಳಿತಕ್ಕೊಳಗಾಗಿದ್ದು, ಅವರ ಕಿರುಕುಳದಿಂದ ಆತ್ಮಹತ್ಯಗೆ ಯತ್ನಿಸಿದ್ದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಆರೋಪಿಸಿದ್ದು, ಅವರು ಹಲವು ಹುಡುಗಿಯರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಸೋಲಿನ ನಂತರ ಡಬ್ಲ್ಯುಎಫ್‌ಐ ಅಧ್ಯಕ್ಷರು ನನ್ನನ್ನು ನಕಲಿ ನಾಣ್ಯ ಎಂದು ಕರೆದಿದ್ದರು. ಅಲ್ಲದೆ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇವರ ಕಿರುಕುಳ ತಾಳಲಾರದೆ ನಾನು ಆತ್ಮಹತ್ಯೆಗೆ ಚಿಂತಿಸಿದ್ದೆ ಎಂದಿದ್ದಾರೆ. ಯಾವುದೇ ಕುಸ್ತಿಪಟುವಿಗೆ ಏನಾದರೂ ಆದರೆ, ಅದಕ್ಕೆ ಡಬ್ಲ್ಯುಎಫ್‌ಐ ಅಧ್ಯಕ್ಷರೇ ನೇರ ಹೊಣೆಯಾಗಿರುತ್ತಾರೆ ಎಂದು ವಿನೇಶ್ ಫೋಗಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

andolanait

Recent Posts

ಭತ್ತದ ಕೊಯ್ಲಿಗೆ ಮುನ್ನ ಕೆಲವು ಸಲಹೆಗಳು

• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…

5 mins ago

ರಾಜ್ಯದಲ್ಲಿ ಬಗೆಹರಿಯದ ಬಿಜೆಪಿ ಬಣ ಹೋರಾಟ

ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…

14 mins ago

ಸದನದಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು; ಮಹಿಳಾ ಸದಸ್ಯರ ಬಗ್ಗೆ ಪ್ರತಿಕ್ರಿಯಿಸುವಾಗ ಎಚ್ಚರ ಬೇಕು

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…

20 mins ago

ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು

ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್‌ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…

27 mins ago

ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…

2 hours ago

ಎಲ್ಲರ ಪಕ್ಕ ಕೂರುವ ಸಮಾನ ಹಕ್ಕು ನಮಗೆ ಬೇಕು

'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…

2 hours ago