ಕ್ರೀಡೆ

ವಿಶ್ವಕಪ್ ಜರ್ಸಿಯಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಿರಿ: ಬಿಸಿಸಿಐಗೆ ಸೆಹ್ವಾಗ್ ಆಗ್ರಹ

ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, ಆಟಗಾರರು ಭಾರತ್ ಎಂದು ಬರೆದಿರುವ ಜರ್ಸಿಗಳನ್ನು ಧರಿಸಬೇಕು. ಹೆಸರು ನಮ್ಮಲ್ಲಿ ಹೆಮ್ಮೆ ಹುಟ್ಟುಹಾಕಬೇಕು ಎಂದು ನಾನು ಯಾವಾಗಲೂ ನಂಬುತ್ತೇನೆ. ನಾವು ಭಾರತೀಯರು. ಇಂಡಿಯಾ ಎನ್ನುವುದು ಬ್ರಿಟಿಷರು ನೀಡಿದ ಹೆಸರು. ಭಾರತ್ ಎಂಬ ಹೆಸರು ಯಾವಾಗಲೋ ಇಡಬೇಕಾಗಿತ್ತು ಎಂದು ಹೇಳಿದ್ದಾರೆ.

ಈ ವಿಶ್ವಕಪ್‌ನಲ್ಲಿ ನಮ್ಮ ಆಟಗಾರರು ಭಾರತ್ ಹೆಸರಿನ ಜರ್ಸಿಗಳನ್ನು ಧರಿಸುವುದನ್ನು ಖಚಿತಪಡಿಸಬೇಕೆಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ವಿನಂತಿಸುವೆ. ಟೀಮ್ ಇಂಡಿಯಾ ಅಲ್ಲ ಟೀಮ್ ಭಾರತ್ ಆಗಬೇಕು ಎಂದು ಸೆಹ್ವಾಗ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ಸೆ.9ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಜಿ-20 ಔತಣಕೂಟಕ್ಕೆ ಎಂದಿನಂತೆ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಡ್ ಆಫ್ ಭಾರತ್ ಹೆಸರಿನಲ್ಲಿ ಆಹ್ವಾನ ಪತ್ರಗಳನ್ನು ಕಳುಹಿಸಿರುವುದು ವಿವಾದ ಉಂಟಾಗಿರುವಾಗಲೇ ಸೆಹ್ವಾಗ್ ಈ ಹೇಳಿಕೆ ನೀಡಿದ್ದಾರೆ

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago