ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.
ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.
ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.
ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್‌ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…