ಕ್ರೀಡೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು.?

ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.

ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.

ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.

ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್‌ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.

andolanait

Recent Posts

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

9 mins ago

ದಸರಾ: ರಾಜಪಥದಲ್ಲಿ ಅಂಬಾರಿ ಸಂಚಾರ!

ಪ್ರಶಾಂತ್ ಎಸ್. ಕೆಎಸ್‌ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್‌ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…

14 mins ago

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

18 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

19 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago