ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಫೈನಲ್ ಪಂದ್ಯವು ಜೂನ್ 7ರಿಂದ 11ರವರೆಗೆ ಇಂಗ್ಲೆಂಡ್‌ನ ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.
2021ರಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಿದ್ದಾಜಿದ್ದಿನ ಪೋರಾಟ ನಡೆಸಿಯೂ ನ್ಯೂಜಿಲೆಂಡ್ ಎದುರು ಮುಗ್ಗರಿಸಿತ್ತು. ಇದೀಗ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಿದೆ.
ಅಂದಹಾಗೆ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಗೆಲ್ಲುವ ತಂಡಕ್ಕೆ 13.2 ಕೋಟಿ ರೂಗಳ ಬಹುಮಾನ ಮೊತ್ತ ಲಭ್ಯವಾಗಲಿದೆ. ರನ್ನರ್ಸ್‌ಅಪ್ ತಂಡಕ್ಕೆ 6.6 ಕೋಟಿ ರೂ. ಲಭ್ಯವಾಗಲಿದೆ.
ಫೈನಲ್‌ನ ನೇರ ಪ್ರಸಾರ ಹೇಗೆ?
ಫೈನಲ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಟೆಲಿವಿಷನ್ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಲಭ್ಯವಾಗಲಿದೆ. ಐಸಿಸಿಐ ಅಧಿಕೃತ ವೆಬ್‌ಸೈಟ್‌ನಲ್ಲೂ ನೇರ ಪ್ರಸಾರ ಪಡೆಯಬಹುದಾಗಿದೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ನೇರ ಪ್ರಸಾರ ಲಭ್ಯವಾಗಲಿದೆ. ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ.
ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿ ಹಿನ್ನಲೆ
ಟೆಸ್ಟ್ ಕ್ರಿಕೆಟ್‌ನ ಜನಪ್ರಿಯತೆ ಹೆಚ್ಚಿಸುವ ಉದ್ದೇಶದಿಂದ 2019ರಲ್ಲಿ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯನ್ನು ಆರಂಭಿಸಲಾಯಿತು. ಟೂರ್ನಿಯ ಮೊದಲ ಆವೃತ್ತಿಯ ಫೈನಲ್ 2021ರ ಜೂನ್‌ನಲ್ಲಿ ನಡೆದು ಟೀಮ್ ಇಂಡಿಯಾ ವಿರುದ್ಧ ಗೆದ್ದ ನ್ಯೂಜಿಲೆಂಡ್ ಚೊಚ್ಚಲ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.
ಅಂದಹಾಗೆ 2009ರಲ್ಲೇ ಈ ಮಾದರಿಯ ಟೂರ್ನಿ ಆರಂಭಕ್ಕೆ ಚರ್ಚೆ ಮಾಡಲಾಗಿತ್ತು. 2010ರಲ್ಲಿ ಇದಕ್ಕೆ ಅನುಮೋದನೆ ಲಭ್ಯವಾಗಿ, 2013ರ ಚಾಂಪಿಯನ್ಸ್ ಟ್ರೋಫಿ ಜಾಗದಲ್ಲಿ ಟೆಸ್ಟ್ ಚಾಂಪಿಯನ್‌ಷಿಪ್ ಆಯೋಜಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಇದು ಕಾರ್ಯರೂಪಕ್ಕೆ ಬರಲಿಲ್ಲ. ಇನ್ನು 2017ರ ಬಳಿಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ರದ್ದುಪಡಿಸಲಾಯಿತು. ಬಳಿಕ 2019ರಲ್ಲಿ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಚಾಲನೆ ದೊರೆಯಿತು.
ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸುತ್ತಿರುವ ತಂಡಗಳು
ಟೆಸ್ಟ್ ಕ್ರಿಕೆಟ್ ಆಡುವ ಎಲ್ಲಾ ರಾಷ್ಟ್ರಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತವೆ. ಆಸ್ಟ್ರೇಲಿಯಾ, ಭಾರತ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಪಾಕಿಸ್ತಾನ, ಶ್ರೀಲಂಕಾ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಜಿಂಬಾಬ್ವೆ ಮತ್ತು ಬಾಂಗ್ಲಾದೇಶ. ಎರಡನೇ ಆವೃತ್ತಿಯಲ್ಲಿ ಅಫಘಾನಿಸ್ತಾನ, ಐರ್ಲೆಂಡ್ ಮತ್ತು ಜಿಂಬಾಬ್ವೆ ತಂಡಗಳು ಪೈಪೋಟಿ ನಡೆಸಿಲ್ಲ.
ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯಕ್ಕೆ ಇತ್ತಂಡಗಳ ವಿವರ ಹೀಗಿದೆ
ಆಸ್ಟ್ರೇಲಿಯಾ : ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕೇರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜಾಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜಾಶ್ ಇಂಗ್ಲಿಸ್ (ವಿಕೆಟ್‌ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ನೇಥನ್ ಲಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಮತ್ತು ಡೇವಿಡ್ ವಾರ್ನರ್.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್‌ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್ ಮತ್ತು ಇಶಾನ್ ಕಿಶನ್.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…