ನವದೆಹಲಿ: ಮುಂದಿನ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ವೇಳೆ ಬೋನಸ್ ಪಾಯಿಂಟ್ ವ್ಯವಸ್ಥೆ ಅಳವಡಿಸಲು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಚಿಂತನೆ ನಡೆಸುತ್ತಿದೆ.
ಈಗ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಅತ್ಯಲ್ಪ ಅಂತರದಿಂದ ಅಥವಾ ಇನ್ನಿಂಗ್ಸ್ ಅಂತರದಿಂದ ಗೆಲ್ಲುವ ತಂಡಕ್ಕೆ 12 ಪಾಯಿಂಟ್. ಟೈ ಆದರಲ್ಲಿ 6 ಪಾಯಿಂಟ್ ಹಾಗೂ ಡ್ರಾ ಆದಲ್ಲಿ ತಂಡಗಳು ತಲಾ 4 ಪಾಯಿಂಟ್ ಪಡೆಯುತ್ತವೆ.
ಐಸಿಸಿಯಿ ಈ ನಿಯಮಗಳಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ. ಇದರನ್ವಯ ಇನ್ನಿಂಗ್ಸ್ ಗೆಲುವು ಅಥವಾ ದೊಡ್ಡ ಅಂತರದಿಂದ ಗೆಲ್ಲುವ ತಂಡಕ್ಕೆ ಬೋನಸ್ ಪಾಯಿಂಟ್ ನೀಡುವ ವಿಷಯ ಪರಿಗಣನೆಯಲ್ಲಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.
ಪ್ರಬಲ ತಂಡಗಳಾದ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಇನ್ನಿತರ ತಂಡಗಳ ವಿರುದ್ಧ ಗೆಲುವು ಸಾಧಿಸಿದಾಗ ಹೆಚ್ಚಿನ ಅಂಕ ನೀಡಬೇಕು ಎಂದು ಹಲವರು ಅಭಿಪ್ರಾಯ ನೀಡಿದ್ದಾರೆ.
ಇದು ಒಳ್ಳೆಯ ನಿಲುವು ಆಗಲಿದೆ. ಈ ವ್ಯವಸ್ಥೆ ಜಾರಿಯಿಂದ ಕುತೂಹಲಕರ ಪಂದ್ಯಗಳನ್ನು ನಿರೀಕ್ಷಿಸಬಹುದು ಎಂದು ಭಾರತ ತಂಡದ ಮಾಜಿ ಆಟಗಾರರೊಬ್ಬರು ತಿಳಿಸಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…