ಕ್ರೀಡೆ

WWE ಸ್ಟಾರ್, ಮಾಜಿ ವಿಶ್ವ ಚಾಂಪಿಯನ್ ಬ್ರೇ ವ್ಯಾಟ್ ನಿಧನ

ನ್ಯೂಯಾರ್ಕ್: ವರ್ಲ್ಡ್ ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾದರು ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು.

36 ವರ್ಷದ ಬ್ರೇ ವ್ಯಾಟ್ ಅವರು ಹೃದಯಾಘಾತದಿಂದ ನಿಧನರಾದರು ಎಂದು ವರದಿಯಾಗಿದೆ.

“ಡಬ್ಲ್ಯೂ ಡಬ್ಲ್ಯೂಇ ಹಾಲ್ ಆಫ್ ಫೇಮರ್ ಮೈಕ್ ರೊಟುಂಡಾ ಅವರಿಂದ ಇದೀಗ ಕರೆ ಬಂದಿದೆ, ಅವರು ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇಎಸ್‌ಪಿಎನ್ ಪ್ರಕಾರ, ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಅವರು ಬಹಿರಂಗಪಡಿಸದ ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸುತ್ತಿರಲಿಲ್ಲ. ಅವರು 2009 ರಿಂದ ಡಬ್ಲ್ಯೂ ಡಬ್ಲ್ಯೂಇ ನೊಂದಿಗೆ ಇದ್ದರು. 2021 ಮತ್ತು 2022ರಲ್ಲಿ ಸಕ್ರಿಯರಾಗಿರದ ರೊಟುಂಡಾ ಕಳೆದ ಸೆಪ್ಟೆಂಬರ್‌ ನಲ್ಲಿ ಡಬ್ಲ್ಯೂ ಡಬ್ಲ್ಯೂಇ ಗೆ ವಾಪಸಾದರು.

andolanait

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

1 hour ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

1 hour ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

1 hour ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago