ಕ್ರೀಡೆ

ಟಿ ಟ್ವೆಂಟಿ ವಿಶ್ವಕಪ್‌ಗೆ ಯುವರಾಜ್‌ ಸಿಂಗ್‌ ರಾಯಭಾರಿ

ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್‌ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ.

ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಭಾರತ ತಂಡದ ಭಾಗವಾಗಿದ್ದ ಯುವರಾಜ್‌ ಸಿಂಗ್‌ ಇದೀಗ ರಾಯಭಾರಿಯಾಗಿರುವುದು ಭಾರತೀಯ ಕ್ರಿಕೆಟ್‌ ಪ್ರೇಮಿಗಳಿಗೆ ಸಂತಸವನ್ನು ತಂದಿದೆ.

ಈ ಕುರಿತು ಸ್ವತಃ ಯುವರಾಜ್‌ ಸಿಂಗ್‌ ಸಹ ಪ್ರತಿಕ್ರಿಯೆ ನೀಡಿದ್ದು, ʼಓವರ್‌ ಒಂದರಲ್ಲಿ ಆರು ಸಿಕ್ಸರ್‌ ಬಾರಿಸಿದ್ದು ಸೇರಿದಂತೆ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ನನ್ನ ಕೆಲವು ಅಚ್ಚುಮೆಚ್ಚಿನ ನೆನಪುಗಳಿವೆ. ಆದ್ದರಿಂದ 2024ರ ಟಿ ಟ್ವೆಂಟಿ ವಿಶ್ವಕಪ್‌ನ ಭಾಗವಾಗಲು ಸಂತಸವಾಗುತ್ತಿದೆ. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಆಡಲು ಉತ್ತಮ ಸ್ಥಳ. ಆದರೆ ಯುಎಸ್‌ಎ ಕಡೆ ಕ್ರಿಕೆಟ್‌ ವಿಸ್ತರಿಸಿದ್ದು, ಈ ಬೆಳವಣಿಗೆಯ ಭಾಗವಾಗಲು ಸಹ ಉತ್ಸುಕನಾಗಿದ್ದೇನೆʼ ಎಂದು ಹೇಳಿಕೆ ನೀಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

1 hour ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

1 hour ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

2 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago