ಕ್ರೀಡೆ

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಮೌನ ಮುರಿದ ಯುಜ್ವೇಂದ್ರ ಚಹಲ್!

ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ.‌ ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ನಲ್ಲಿ ಕೆಂಟ್ ಪರ ಕೌಂಟಿ ಕ್ರಿಕೆಟ್ ಆಡುತ್ತಿರುವ ಚಹಲ್, ವಿಸ್ಡನ್ ಜೊತೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವುದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಶ್ವಕಪ್ ತಂಡದಲ್ಲಿ 15 ಸದಸ್ಯರಿಗೆ ಮಾತ್ರ ಅವಕಾಶ: ಚಹಲ್
“ತಂಡದಲ್ಲಿ 15 ಸದಸ್ಯರಿಗೆ ಮಾತ್ರ ಸ್ಥಾನ ಕಲ್ಪಿಸಲು ಸಾಧ್ಯ ಎಂಬುದು ನನಗೆ ತುಂಬಾ ಚೆನ್ನಾಗಿ ತಿಳಿದಿದೆ. ಏಕೆಂದರೆ ಇದು ವಿಶ್ವಕಪ್ ಟೂರ್ನಿ. ಇಲ್ಲಿ 17 ರಿಂದ 18 ಮಂದಿಗೆ ಸ್ಥಾನ ನೀಡಲು ಆಗುವುದಿಲ್ಲ,” ಎಂದು ಚಹಲ್ ಹೇಳಿದ್ದಾರೆ.

ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.

ಮನೆಯಲ್ಲಿ ಕುಳಿತುಕೊಳ್ಳಲು ಇಷ್ಟವಿಲ್ಲ
ರಾಜಸ್ಥಾನ್ ರಾಯಲ್ಸ್ ನ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರು ಇಂಗ್ಲೆಂಡ್ ಪರ ಕೌಂಟಿ ಕ್ರಿಕೆಟ್ ಆಡುವ ಹಿಂದಿರುವ ಕಾರಣವನ್ನು ತಿಳಿಸಿದ್ದಾರೆ.

“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.

ಟೆಸ್ಟ್ ಪಂದ್ಯ ಆಡಲು ಬಯಸುತ್ತೇನೆ
“ರೆಡ್ ಬಾಲ್ (ಟೆಸ್ಟ್) ನಲ್ಲಿ ಆಡಲು ನನಗೆ ಇಲ್ಲಿ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಅನುಭವವಾಗಿದ್ದು, ಭಾರತ ತಂಡದ ಪರವಾಗಿಯೂ ಗಂಭೀರವಾಗಿ ರೆಡ್ ಬಾಲ್ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಚಹಲ್ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಗಳ ರೂಪದಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಆರ್.ಅಶ್ವಿನ್ ಗಾಯಗೊಂಡ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಕುಲ್ದೀಪ್ ಯಾದವ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಆದರೆ ತಂಡದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಗೆ ಸ್ಥಾನ ಕಲ್ಪಿಸಬೇಕಿತ್ತು ಎಂದು ಹಲವು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago