Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

ಬೆಂಗಳೂರಿಗೆ ಬಂದ ʼರಾಗʼ : ಜಾಹೀರಾತು ಪ್ರಕರಣದಲ್ಲಿ ಜಾಮೀನು ಮಂಜೂರು

ಬೆಂಗಳೂರು: 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಮಾಡಿದ್ದ ಪರ್ಸೆಂಟೇಜ್‌ ಆರೋಪದ ಬಗ್ಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಲೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಈ ಬಗ್ಗೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿದ ರಾಹುಲ್‌ ಅವರಿಗೆ  ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯದ ಕಲಾಪ ಆರಂಭವಾದಾಗ ವಾದ ವಿವಾದ ಆಲಿಸಿದ ನ್ಯಾಯಾಧೀಶರು ರಾಹುಲ್‌ ಗಾಂಧಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಜೂನ್‌ 30 ಕ್ಕೆ ಮುಂದೂಡಲಾಗಿದೆ.  ಷರತ್ತ ಬದ್ಧ ಜಾಮೀನಿಗೆ ಡಿ.ಕೆ ಸುರೇಶ್‌ ಅವರು ಶ್ಯೂರಿಟಿ ಸಹಿ ಹಾಕಿದ್ದಾರೆ.

ಇಂದು ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದು ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಬರಮಾಡಿಕೊಂಡು, ರಾಹುಲ್‌ ಗಾಂಧಿ ಅವರ ಜೊತೆಗೆ ಕೋರ್ಟ್‌ಗೆ ಬಂದಿದ್ದರು.

ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಪತ್ರಿಕೆಗಳಲ್ಲಿ ಬಿಜೆಪಿಯ ಬಗ್ಗೆ ಸುಳ್ಳು ಜಾಹೀರಾತು ನೀಡಿ ಪಕ್ಷಕ್ಕೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ರಾಹುಲ್‌ ಗಾಂಧಿ ಅವರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.

ಇದೇ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಕೂಡ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಬಳಿಕೆ ಅವರಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿತ್ತು.

Tags:
error: Content is protected !!