Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಾಳೆ ದ್ವಿತೀಯ ಪಿಯು ಪರೀಕ್ಷೆ ರಿಸಲ್ಟ್‌: ಈ ಲಿಂಕ್ ಮೂಲಕ ನಿಮ್ಮ ಫಲಿತಾಂಶ ನೋಡಿ!

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ (ಏ.೧೦, ಬುಧವಾರ) ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ಪ್ರಕಟಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುವ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್​​ಸೈಟ್​ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶವನ್ನು karresults.nic.in ಅಥವಾ pue.kar.nic ಅಧಿಕೃತ ವೆಬ್​ಸೈಟ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವಿದ್ಯಾರ್ಥಿಗಳು, ಪೋಷಕರು ವೀಕ್ಷಿಸಬಹುದಾಗಿದೆ.

Tags: