ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಮಾ.26ರಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಿಢೀರನೇ ಚಿನ್ನಸ್ವಾಮಿ ಸ್ಟೇಡಿಯಂನ ಐಪಿಎಲ್ ಪಂದ್ಯ ಶಾಸಕರಿಗೆ ಟಿಕೆಟ್ ಹಂಚಿಕೆ ಹಾಗೂ ಶಾಸಕರ ಮರ್ಯಾದೆಯ ಕುರಿತು ಚರ್ಚೆಗಳು ಪ್ರಾರಂಭವಾದದ್ದು ತಮಗೆ ತಿಳಿದೇ ಇದೆ.
ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಟರನ್ನಾಗಿಸುತ್ತದೆ.
ಈ ಹಿನ್ನೆಲೆಯಲ್ಲಿ ಹಾಗೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರ ಅಥವಾ ಕೆಎಸ್‌ಸಿಎ ವತಿಯಿಂದ ಶಾಸಕರಿಗೆ ನೀಡಲಾಗುವ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್‌ಗಳನ್ನು ನಾನು ಸವಿನಯವಾಗಿ ನಿರಾಕರಿಸಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…