Mysore
20
scattered clouds

Social Media

ಬುಧವಾರ, 12 ಆಗಸ್ಟ್ 2026
Light
Dark

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ ಪೊಲೀಸರ ಇಲಾಖೆ ಮುಂದಾಗಿದೆ.

ಸಂಚಾರ ಪೊಲೀಸ್‌ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯು ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಕಮಿಷನರ್‌ಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ಇಲಾಖೆ ಸೂಚಿಸಿರುವ ಪ್ರಮುಖ ಸೌಲಭ್ಯಗಳು ಈ ಕೆಳಕಂಡಂತಿವೆ.

೧) ನೆರಳಿನ ವ್ಯವಸ್ಥೆ
೨) ಮಾಸ್ಕ್‌ ವಿತರಣೆ
೩) ಪಾನೀಯ ವ್ಯವಸ್ಥೆ

ಈ ಸೌಲಭ್ಯಗಳನ್ನು ರಾಜ್ಯಾದ್ಯಂತ ತಕ್ಷಣವೇ ಜಾರಿಗೆ ತರುವಂತೆ ಪೊಲೀಸ್‌ ಉಪ ಮಹಾ ನಿರೀಕ್ಷಕರು ಆದೇಶಿಸಿದ್ದಾರೆ. ಈ ಕ್ರಮವು ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೊಡ್ಡ ಮಟ್ಟದ ರಿಲೀಫ್‌ ನೀಡಲಿದೆ ಎಂದು ಹೇಳಲಾಗಿದೆ.

 

Tags:
error: Content is protected !!