ರಾಜ್ಯ

ಶ್ರೀಕೃಷ್ಣನ ದಾಖಲೆ ಮುರಿಯುವ ಪ್ರಜ್ವಲ್:‌ ಸಚಿವ ತಿಮ್ಮಾಪುರ ವಿವಾದಾತ್ಮಕ ಹೇಳಿಕೆ

ವಿಜಯಪುರ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಸಚಿವ ಆರ್‌ಬಿ ತಿಮ್ಮಾಪುರ ನೀಡುರುವ ಹೇಳಿಕೆಗೆ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪ್ರಜ್ವಲ್‌ರನ್ನು ಭಗವಾನ್‌ ಶ್ರೀಕೃಷ್ಣಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದಾರೆ. ಈ ವಿವಾದಿತ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಅಬಕಾರಿ ಸಚಿವ ಬಿಆರ್‌ ತಿಮ್ಮಾಪುರ ಪ್ರಜ್ವಲ್‌ ಪ್ರಕರಣ ಸಂಬಂಧ ಮಾತನಾಡಿ ಪ್ರಜ್ವಲ್‌ ರೇವಣ್ಣನವರ ಪೆನ್‌ಡ್ರೈವ್‌ ಪ್ರಕರಣ ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎನ್ನುವುದು ನನ್ನ ಭಾವನೆ. ಇದು ಗಿನ್ನಿಸ್‌ ದಾಖಲೆಯಾಗಬಹುದು. ಭಗವಾನ್‌ ಶ್ರೀಕೃಷ್ಣನ ಭಕ್ತಿಭಾವಕ್ಕೆ ಸ್ತ್ರೀಯರು ಪರವಶರಾಗುತ್ತಿದ್ದರು. ಆದರೆ ಪ್ರಜ್ವಲ್‌ ಪ್ರಕರಣ ಹಾಗಲ್ಲ. ಕೃಷ್ಣನ ದಾಖಲೆ ಮುರಿಯಲು ಈತ ಬಯಸಿದ್ದ ಎನ್ನಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ವಿಜಯಪುರ ನಗರದ ಪಾಟೀಲ್ ಗಾರ್ಡೇನಿಯಾದಲ್ಲಿ ಸಭೆ ನಡೆಸಿದ ಸಚಿವರು ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಜನಪರ ಕೊಡುಗೆಗಳಿಗೆ ಜನರು ಮೆಚ್ಚಿದ್ದಾರೆ. ನಮ್ಮ ಯೋಜನೆಗಳಿಂದ ಜನ ಕಾಂಗ್ರೆಸ್‌ ಪರವಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜೂ ಆಲಗೂರು ಗೆಲವು ಖಚಿತ ಎಂದಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago