ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ ಸಿಎಂ ಸಿದ್ದರಾಮಯ್ಯ ವಿಶೇಷವಾದ ಪೂಜೆ ಸಲ್ಲಿಸಿದರು.
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಇದೇ ಜುಲೈನಲ್ಲಿ 90 ಲಕ್ಷ ಲೀಟರ್ ಪ್ರತಿ ದಿನ ಇತ್ತು. ಈ ವರ್ಷ ಒಂದು ದಿನಕ್ಕೆ 1 ಕೋಟಿ ಲೀಟರ್ ಉತ್ಪಾದನೆ ತಲುಪಿದ್ದೇವೆ. ಇದೊಂದು KMF ಇತಿಹಾಸದಲ್ಲಿ ಮೈಲಿಗಲ್ಲು. ನಾನು ಪಶುಸಂಗೋಪನೆ ಮಂತ್ರಿ ಸ್ವಲ್ಪ ದಿನ ಆಗಿದ್ದೆ. ಆಗ ಮಿಲ್ಕ್ ಯೂನಿಯನ್‌ಗೆ ಡೈರಿಗಳನ್ನ ಸೇರಿಸಿದ್ದೆವು. ನಮ್ಮಲ್ಲಿ ಈಗ 15 ಯುನಿಯನ್‌ಗಳು ಇವೆ. 15 ಡೈರಿಗಳು ಇವೆ. ಇವು ಹಾಲು ಮಾರಾಟ ಮಾಡುತ್ತವೆ ಎಂದು ತಿಳಿಸಿದರು.
ಈ ಸಂದರ್ಭ ಸಚಿವರಾದ ಚೆಲುವರಾಯಸ್ವಾಮಿ, ರಾಜಣ್ಣ, ಭೈರತಿ ಸುರೇಶ್, ಜಮೀರ್ ಅಹಮದ್ , ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮಾಜಿ ಸಂಸದ ಡಿಕೆ ಸುರೇಶ್ ಸೇರಿ ಇತರ ಶಾಸಕರು ಭಾಗಿಯಾಗಿದ್ದರು
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…