Mysore
18
few clouds

Social Media

ಬುಧವಾರ, 21 ಜನವರಿ 2026
Light
Dark

ರೈತ ಉತ್ಪಾದಕ ಸಂಸ್ಥೆ (FPO)ಗಳಿಗೆ 3 ಕೋಟಿ ರೂ ಸಬ್ಸಿಡಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಆಸಕ್ತಿ ಇದ್ದರಷ್ಟೇ ಅಂತಹ ಯೋಜನೆಗಳು ಯಶ್ವಸಿಯಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು..

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಿಂದ ಲಾಭ ಪಡೆಯುವ ಉದ್ದೇಶದಿಂದ ಸರ್ಕಾರ ಅನೇಕ ರೈತಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಲಾಭ ಪಡೆಯುವ ಮೂಲಕ ರೈತ ಸಮುದಾಯ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು..

ಇದನ್ನು ಓದಿ: ಮಂಡ್ಯ | ಜಮೀನುಗಳಿಗೆ ನುಗ್ಗಿದ ನೀರು: ಬೆಳೆ ನಷ್ಟದ ಆತಂಕದಲ್ಲಿ ರೈತರು

PMFME ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತ ಉತ್ಪಾದಕ ಸಂಸ್ಥೆಗಳು (FPO) ಹಾಗು ಸದಸ್ಯರು, ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಸಂಸ್ಕರಣೆ ಮುಖಾಂತರ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ರೈತರಿಗೆ ಇದೇ ವೇಳೆ ಸಚಿವರು ಕರೆ ನೀಡಿದರು.

ಈ ಯೋಜನೆಯಡಿ ಸಾಮಾನ್ಯ ಮೂಲ ಸೌಕರ್ಯ ಸ್ಥಾಪನೆಗೆ ಶೇ.35 ಸಾಲ ಸಹಾಯಧನ ಅಥವಾ ಗರಿಷ್ಠ 3 ಕೋಟಿ ರೂ. ಸಬ್ಸಿಡಿ ಸಿಗಲಿದೆ. ಎಲ್ಲಾ FPO ಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ಅಧ್ಯಕ್ಷ ಹರೀಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಜಂಟಿ ನಿರ್ದೇಶಕ ಡಾ.ಶಿವಕುಮಾರ್, ಅಶೋಕ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

Tags:
error: Content is protected !!