ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.
ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪೋರ್ಟಲ್ ಸುಧಾರಣೆಗೆ ಸೂಚನೆ
ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಗೌರವಧನ ನಿಲ್ಲಿಸದೆ ರಜೆ
ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಸರ್ಕಾರ ನಿಮ್ಮೊಂದಿಗಿದೆ
ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ
ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಛೋಸಿಸ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ. ಚಿರತೆಯ…
ಬೆಂಗಳೂರು: ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಸಲಗಳಿಗೂ ರೇಟ್ ಫಿಕ್ಸ್ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕ ಇದೆ ಎಂದು ಕೇಂದ್ರ…
ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ…
ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾವತ್ತೂ…
ಮೈಸೂರು: ನಕ್ಸಲಿಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು…
ಬೆಂಗಳೂರು: ಶತ್ರುಗಳನ್ನು ಮುಗಿಸಿ ಅಧಿಕಾರ ಪಡೆಯಲು ಡಿಕೆ ಶಿವಕುಮಾರ್ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕಾ…