ರಾಜ್ಯ

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಮಂಜೂರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಕೋರಿದರು.

ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಚುಕ್ಕೆ ಗುರಿತಿನ ಪ್ರಶ್ನೆ ಉತ್ತರ ಪಡೆದು ಮಾತನಾಡಿದ ಅವರು, ಕೆ.ಆರ್.ಆಸ್ಪತ್ರೆಯಲ್ಲಿ 37 ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್ ಸೇವೆಗೆ ತಂತ್ರಜ್ಞರ ಕೊರತೆ ಇದೆ. ಖಾಲಿ ಇರುವ 117 ಹುದ್ದೆಗಳನ್ನು ಭರ್ತಿ ಮಾಡಿ, ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಕೆ.ಆರ್.ಆಸ್ಪತ್ರೆಯ ಐ.ಸಿ.ಯು ಘಟಕದಲ್ಲಿ 50 ಹಾಸಿಗೆ ಮಾತ್ರ ಲಭ್ಯವಿದ್ದು, ತುರ್ತು ಚಿಕಿತ್ಸೆಗಾಗಿ ರೋಗಿಗಳು ಪರದಾಡುವಂತಾಗಿದೆ. ಚಲುವಾಂಬ ತಾಯಿ ಮಕ್ಕಳ ಆಸ್ಪತ್ರೆಯಲ್ಲಿಯೂ ಹಾಸಿಗೆಗಳ ಕೊರತೆ ಇದ್ದು, ಒಂದು ಹಾಸಿಗೆಯಲ್ಲಿ ಎರಡು ಮಕ್ಕಳನ್ನು ಮಲಗಿಸುತ್ತಿದ್ದಾರೆ. ಶಿಶು ಮರಣ ಪ್ರಮಾಣ ಶೇ.11.3 ರಷ್ಟಿದ್ದು, ಕೂಡಲೇ ಎರಡು ಆಸ್ಪತ್ರೆಯಲ್ಲೂ 100 ಹಾಸಿಗೆಯ ಐ.ಸಿ.ಯು ಘಟಕ ಸ್ಥಾಪಿಸಬೇಕು ಎಂದರು.

ಟ್ರಾಮಾ ಕೇರ್ ಸೆಂಟರ್ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಒ.ಪಿ.ಡಿ ಸೇವೆ ಮಾತ್ರ ಚಾಲ್ತಿಯಲ್ಲಿದೆ. ಇವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಕ್ರಮವಹಿಸಬೇಕು. ಕೆ.ಆರ್.ಆಸ್ಪತ್ರೆಯಿಂದ 5 ಕಿ.ಮೀ. ದೂರದಲ್ಲಿರುವ ಈ ಆಸ್ಪತ್ರೆಗೆ ರೋಗಿಗಳನ್ನು ಸಾಗಿಸಲು ಕಷ್ಟವಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯಂತೆ ಒಂದೇ ಆವರಣದಲ್ಲಿ ಕಟ್ಟಡ ನಿರ್ಮಿಸಿಬೇಕು. ಇದಕ್ಕಾಗಿ ಎಂಎಂಸಿ&ಆರ್‌ಐ ನಲ್ಲಿ ಸಾಕಷ್ಟು ಜಾಗ ಲಭ್ಯವಿದೆ. ಈ ಕ್ರಮದಿಂದಾಗಿ ತುರ್ತು ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಹೇಳಿದರು.

ಆಸ್ಪತ್ರೆಗೆ ಮತ್ತಷ್ಟು ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕು. ಇಲ್ಲಿ ಪರಿಣಿತ ವೈದ್ಯರಿದ್ದಾರೆ. ಆದರೆ ನರ್ಸ್‌ಗಳ ಕೊರತೆಯಿದ್ದು, ಹೊರಗುತ್ತಿಗೆಯಿಂದ ಪಡೆಯುವ ಸೇವೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್ ಅವರು, ಶೀಘ್ರದಲ್ಲೇ ಇನ್ಸಿಟ್ಯೂಟ್ ಆಫ್ ನೆಫ್ರಾಲಜಿ 100 ಹಾಸಿಗೆವುಳ್ಳ ಶಾಖೆ ನಿರ್ಮಾಣ ಮಾಡಲಾಗುತ್ತಿದೆ. ಒಳ ಮೀಸಲಾತಿ ನಿವಾರಣೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಸಿ ತೀರ್ಮಾನ ಕೈಗೊಳ್ಳಲಾಗಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲಾಗುವುದು. ಅಲ್ಲದೆ, 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

2 mins ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

14 mins ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

3 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

3 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

3 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

3 hours ago