ಚಿತ್ರದುರ್ಗ: ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಗೊಳಿಹಟ್ಟಿ ಚಂದ್ರಶೇಖರ್ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಗೊಳಿಹಟ್ಟಿ ಚಂದ್ರಶೇಖರ್ ಅವರು ಬೋವಿ ನಿಗಮದಲ್ಲಿ ೧೦೦ ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಕೋಟ ಶ್ರೀನಿವಾಸ್ ಪೂಜಾತಿ ವಿರುದ್ಧ ಆರೋಪ ಮಾಡಿದ್ದಾರೆ.
ಬಸವರಾಜು ಬೊಮ್ಮಾಯಿ ಅವರ ಅವಧಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಈ ಹಗರಣ ಮಾಡಿದ್ದಾರೆ. ಹಗರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಸಿಐಡಿ ತನಿಖೆ ಬೇಡ, ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ ಎಂದ ಶೇಖರ್ ಒತ್ತಾಯಿಸಿದ್ದಾರೆ.