ರಾಜ್ಯ

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ.

ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಕೃಷಿ ಸಚಿವರ ಸಿಬ್ಬಂದಿಯ ವಿಶೇಷ ಕಾಳಜಿಯಿಂದ ಎಲ್ಲಾ ಬಾಕಿ ಕಡತಗಳನ್ನು ಸಮಗ್ರವಾಗಿ ಪರಿಶೀಲಿಸಿ ಸಮಯಬದ್ಧವಾಗಿ ವಿಲೇವಾರಿ ಮಾಡಲಾಗಿದೆ‌. ಇದರ ಮೂಲಕ ಆಡಳಿತದ ದಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಮಹತ್ವದ ಹೆಜ್ಜೆ ಇಡಲಾಗಿದೆ.

ಕಳೆದ ಮೂರು ವರ್ಷಗಳಿಂದಲೂ ಕೃಷಿ ಸಚಿವರ ಕಛೇರಿಯಲ್ಲಿ ನೂರು ಶೇಕಡ ಕಡತ ವಿಲೇವಾರಿ ಸಾಧನೆ ಮಾಡುತ್ತಾ ಬರಲಾಗಿದೆ. ಅನುಭವ ಮತ್ತು ಮಾರ್ಗಸೂಚಿಗಳನ್ನು ಆಧಾರವಾಗಿ ಪಡೆದುಕೊಂಡು ಈ ವರ್ಷವೂ ಸಮರ್ಪಕ ಯೋಜನೆ ಹಾಗೂ ಪರಿಣಾಮಕಾರಿ ಕಾರ್ಯ ಸಾಧನೆಗಳ ಮೂಲಕ ಈ ಸಾಧನೆ ಸಾಧ್ಯವಾಗಿದೆ.

2025-26 ನೇ ಸಾಲಿನಲ್ಲಿ ಕೃಷಿ ಸಚಿವರ ಕಚೇರಿಯಲ್ಲಿ ಒಟ್ಟು 909 ಕಡತಗಳನ್ನ ಪರಿಶೀಲಿಸಿ ನಿಯಮಾನುಸಾರ ಹಾಗು ಸಮಯಬದ್ಧವಾಗಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಹಾಗೇಯೆ ಮಾರ್ಚ್ ತಿಂಗಳ ಅಂತ್ಯಕ್ಕೆ ಒಟ್ಟು 4201 ಪತ್ರಗಳನ್ನು ಸ್ವೀಕರಿಸಿದ್ದು, ಎಲ್ಲಾ ಪತ್ರಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ.

ಇನ್ನೂ ವಿಧಾನಸಭೆ ಹಾಗೂ ವಿಧಾನಪರಿಷತ್ ನ ಮಾನ್ಯ ಸದಸ್ಯರು ಒಟ್ಟು 352 ಪ್ರಶ್ನೆಗಳನ್ನು ಕೃಷಿ ಇಲಾಖೆಗೆ ಕೇಳಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಾಗಿದೆ.

ಈ ಸಾಧನೆಗೆ ಸಹಕರಿಸಿದ ಸಚಿವರ ಕಚೇರಿಯ ಆಪ್ತ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆಯ ಎಲ್ಲಾ ಸಿಬ್ಬಂದಿಯವರ ಪರಿಶ್ರಮವನ್ನು ಸಚಿವ ಎನ್.ಚಲುವರಾಯಸ್ವಾಮಿಯವರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಮುಂದುವರೆಸಲು ಸಚಿವರು ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

57 mins ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

1 hour ago

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

2 hours ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

2 hours ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

5 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

5 hours ago