ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ.
ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಕೃಷಿ ಸಚಿವರ ಸಿಬ್ಬಂದಿಯ ವಿಶೇಷ ಕಾಳಜಿಯಿಂದ ಎಲ್ಲಾ ಬಾಕಿ ಕಡತಗಳನ್ನು ಸಮಗ್ರವಾಗಿ ಪರಿಶೀಲಿಸಿ ಸಮಯಬದ್ಧವಾಗಿ ವಿಲೇವಾರಿ ಮಾಡಲಾಗಿದೆ. ಇದರ ಮೂಲಕ ಆಡಳಿತದ ದಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಮಹತ್ವದ ಹೆಜ್ಜೆ ಇಡಲಾಗಿದೆ.
ಕಳೆದ ಮೂರು ವರ್ಷಗಳಿಂದಲೂ ಕೃಷಿ ಸಚಿವರ ಕಛೇರಿಯಲ್ಲಿ ನೂರು ಶೇಕಡ ಕಡತ ವಿಲೇವಾರಿ ಸಾಧನೆ ಮಾಡುತ್ತಾ ಬರಲಾಗಿದೆ. ಅನುಭವ ಮತ್ತು ಮಾರ್ಗಸೂಚಿಗಳನ್ನು ಆಧಾರವಾಗಿ ಪಡೆದುಕೊಂಡು ಈ ವರ್ಷವೂ ಸಮರ್ಪಕ ಯೋಜನೆ ಹಾಗೂ ಪರಿಣಾಮಕಾರಿ ಕಾರ್ಯ ಸಾಧನೆಗಳ ಮೂಲಕ ಈ ಸಾಧನೆ ಸಾಧ್ಯವಾಗಿದೆ.
2025-26 ನೇ ಸಾಲಿನಲ್ಲಿ ಕೃಷಿ ಸಚಿವರ ಕಚೇರಿಯಲ್ಲಿ ಒಟ್ಟು 909 ಕಡತಗಳನ್ನ ಪರಿಶೀಲಿಸಿ ನಿಯಮಾನುಸಾರ ಹಾಗು ಸಮಯಬದ್ಧವಾಗಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಹಾಗೇಯೆ ಮಾರ್ಚ್ ತಿಂಗಳ ಅಂತ್ಯಕ್ಕೆ ಒಟ್ಟು 4201 ಪತ್ರಗಳನ್ನು ಸ್ವೀಕರಿಸಿದ್ದು, ಎಲ್ಲಾ ಪತ್ರಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ.
ಇನ್ನೂ ವಿಧಾನಸಭೆ ಹಾಗೂ ವಿಧಾನಪರಿಷತ್ ನ ಮಾನ್ಯ ಸದಸ್ಯರು ಒಟ್ಟು 352 ಪ್ರಶ್ನೆಗಳನ್ನು ಕೃಷಿ ಇಲಾಖೆಗೆ ಕೇಳಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಾಗಿದೆ.
ಈ ಸಾಧನೆಗೆ ಸಹಕರಿಸಿದ ಸಚಿವರ ಕಚೇರಿಯ ಆಪ್ತ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆಯ ಎಲ್ಲಾ ಸಿಬ್ಬಂದಿಯವರ ಪರಿಶ್ರಮವನ್ನು ಸಚಿವ ಎನ್.ಚಲುವರಾಯಸ್ವಾಮಿಯವರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಮುಂದುವರೆಸಲು ಸಚಿವರು ಸೂಚಿಸಿದ್ದಾರೆ.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…