ಬೆಳಗಾವಿ: ನೂತನವಾಗಿ ರಚನೆಯಾಗಿರುವ 50 ತಾಲ್ಲೂಕುಗಳಲ್ಲಿ ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಧಾನ ಸಭೆಯಲ್ಲಿ ಗುರುವಾರ ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಅಡಬೇಕೆಂಬ ಬೇಡಿಕೆ ಬಂದಿದೆ. ನಮಗೆ ಭೂ ಸ್ವಾಧೀನ ಸಮಸ್ಯೆ ಇತ್ತು. ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.
ಯಾವುದೇ ಆಸ್ಪತ್ರೆಗಳನ್ನು ನಿರ್ಮಾಣ ಮಾಡಬೇಕಾದರೆ ಜಮೀನು ಮುಖ್ಯ. ನಮ್ಮ ಇಲಾಖೆಯಿಂದ ನಾವು ನೇರವಾಗಿ ಭೂಸ್ವಾಧೀನ ಮಾಡಿಕೊಳ್ಳುವಂತಿಲ್ಲ. ಜಿಲ್ಲಾಧಿಕಾರಿಗಳು ಖರೀದಿಸಿ ನಮಗೆ ಹಸ್ತಾಂತರ ಮಾಡಿದರೆ ಕಟ್ಟಡ ನಿರ್ಮಾಣ ಮಾಡಬಹುದು ಎಂದರು.
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಕೇಂದ್ರಕ್ಕೆ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದಿದೆ. ಸಾರ್ವಜನಿಕ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಿ ಜಮೀನು ಸಿಗುತ್ತಿಲ್ಲ. ಭೂ ಸ್ವಾಧೀನ ಕಾಯ್ದೆ ಅನ್ವಯ ಜಮೀನು ಪಡೆಯಲು ಜಿಲ್ಲಾಧಿಕಾರಿಗಳ ಮುಖಾಂತರ ಭೂ ಸ್ವಾಧೀನ ಪಡಿಸಿಕೊಳ್ಳಲು ಅವಕಾಶವಿದೆ. ಸರಗೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಯನ್ನಾಗಿ ಸ್ಥಾಪಿಸಲು ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರ ಅಧಿಕಾರಿಗಳ ಕಚೇರಿ ತೆರೆಯುವ ಪ್ರಸ್ತಾವನೆ ಪರಿಶೀಲನೆ ಹಂತದಲ್ಲಿದೆ ಎಂದು ತಿಳಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಸರಗೂರಿಗೆ 100 ಹಾಸಿಗೆಗಳ ಆಸ್ಪತ್ರೆ : ಶಾಸಕ ಅನಿಲ್ ಚಿಕ್ಕಮಾದುಗೆ ಆರೋಗ್ಯ ಸಚಿವರ ಭರವಸೆ
Previous Article330 ಗ್ರಾಮ ಪಂಚಾಯಿತಿಗಳಲ್ಲಿ ’ಗ್ರಂಥಾಲಯʼ ಸ್ಥಾಪನೆ